BREAKING : ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆ : 5 ತಾಲೂಕಿನ ಶಾಲೆಗಳಿಗೆ ನಾಳೆ ರಜೆ..!!

You are currently viewing BREAKING : ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆ : 5 ತಾಲೂಕಿನ ಶಾಲೆಗಳಿಗೆ ನಾಳೆ ರಜೆ..!!

ಪ್ರಜಾ ವೀಕ್ಷಣೆ ಸುದ್ದಿಜಾಲ :-

ಉತ್ತರಕನ್ನಡ : ಬಹುತೇಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ವರುಣ ಆರ್ಭಟಿಸುತ್ತಿದ್ದು, ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ಭಾರಿ ಮಳೆ ಆಗುತ್ತಿದೆ. ನಿನ್ನೆ ಉತ್ತರ ಕನ್ನಡ ಜಿಲ್ಲೆಯ 5 ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದರು.

ಆದರೆ, ಇಂದು ಕೂಡ ಮಳೆ ಮುಂದುವರೆದಿದ್ದರಿಂದ ನಾಳೆ ಕೂಡ 5 ತಾಲೂಕಗಳ ಶಾಲೆಗಳಿಗೆ ರಜೆ ಮುಂದುವರಿಯಲಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಅವರು ಆದೇಶದಲ್ಲಿ ತಿಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಕುಮಟ, ಅಂಕೋಲ, ಭಟ್ಕಳ ತಾಲೂಕು ಹಾಗೂ ಹೊನ್ನಾವರ ತಾಲೂಕಿನ ಶಾಲೆಗಳಿಗೆ ನಾಳೆಯೂ ರಜೆ ಘೋಷಣೆ ಮುಂದುವರೆಯಲಿದೆ.

Leave a Reply

error: Content is protected !!