ಬೆಂಗಳೂರು : ರಾಜ್ಯದಲ್ಲಿ ಶೇ. 80 ರಷ್ಟು ಬಿಪಿಎಲ್ ಕಾರ್ಡ್ ಗಳನ್ನು ಹೊಂದಿದ್ದಾರೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಡತನ ರೇಖೆಗಿಂತ ಕೆಳಗಿರುವವರ ಪ್ರಮಾಣ ಶೇ. 5.67 ಇರಬೇಕು. ಆದರೆ, ರಾಜ್ಯದಲ್ಲಿ 1.27 ಕೋಟಿ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ನೀಡಿದ್ದೇವೆ. ಅನರ್ಹ ಬಿಪಿಎಲ್ ಕಾರ್ಡುಗಳನ್ನು ರದ್ದು ಪಡಿಸಿ, ಅರ್ಹರಿಗೆ ಬಿಪಿಎಲ್ ಕಾರ್ಡು ಒದಗಿಸಬೇಕು ಎಂದು ಸಿಎಂ ಸಿದ್ದರಾಮಯ್ಯನವರು ಸೂಚಿಸಿದರು.
ಸಿಎಂ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿ & ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ನಡೆಸಿದರು. ಸಭೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವ ಸಂಪುಟದ ಎಲ್ಲ ಸದಸ್ಯರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯೆಲ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಪಾಲ್ಗೊಂಡಿದ್ದರು.