BREAKING NEWS : ಅನರ್ಹ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದು ಮಾಡಿದ ಸಿಎಂ ಸಿದ್ದರಾಮಯ್ಯ..!!

You are currently viewing BREAKING NEWS : ಅನರ್ಹ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದು ಮಾಡಿದ ಸಿಎಂ ಸಿದ್ದರಾಮಯ್ಯ..!!

ಪ್ರಜಾ ವೀಕ್ಷಣೆ ಸುದ್ದಿಜಾಲ :-

ಬೆಂಗಳೂರು : ರಾಜ್ಯ ಸರ್ಕಾರದಿಂದ ಕೆಲವರು ಅನರ್ಹ ಬಿಪಿಎಲ್‌ ಕಾರ್ಡ್‌ಗಳನ್ನು ಹೊಂದಿದವರಿಗೆ ಬಿಗ್ ಶಾಕ್ ನೀಡಿದೆ. ಅನರ್ಹ ಬಿಪಿಎಲ್‌ ಕಾರ್ಡ್‌ಗಳನ್ನು ಕೈಬಿಟ್ಟು ಅರ್ಹ ಫಲಾನುಭವಿಗಳಿಗೆ ಬಿಪಿಎಲ್‌ ಕಾರ್ಡ್‌ಗಳನ್ನು ಒದಗಿಸಲು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿದಂತ ಸಿಎಂ ಸಿದ್ದರಾಮಯ್ಯನವರು, ‘ಕೂಡಲೇ ಸಮಗ್ರ ಪರಿಶೀಲನೆ ನಡೆಸಿ ಅನರ್ಹ ಬಿಪಿಎಲ್‌ ಕಾರ್ಡ್‌ ಕೈಬಿಡಲು ಕ್ರಮ ಕೈಗೊಳ್ಳಬೇಕು. ಹಾಗೆಯೇ ಬಿಪಿಎಲ್‌ ಕುಟುಂಬಗಳಲ್ಲಿನ ಮೃತ ಸದಸ್ಯರ ಹೆಸರು ತೆಗೆದು ಹಾಕುವ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಳ್ಳಬೇಕು. ಜನರನ್ನು ಅನಗತ್ಯವಾಗಿ ಅಲೆದಾಡಿಸಬಾರದು. ಅವರ ಸಮಸ್ಯೆ, ದೂರುಗಳನ್ನು ಆಲಿಸಿ ಅಗತ್ಯ ಪರಿಹಾರ ಒದಗಿಸಬೇಕು ಎಂದು ಸೂಚಿಸಿದ್ದಾರೆ ಎನ್ನಲಾಗಿದೆ.

Leave a Reply

error: Content is protected !!