BREAKING NEWS : ಶೀಘ್ರವೇ “10,000 ಶಿಕ್ಷಕ”ರ ನೇಮಕಾತಿ : ಸಚಿವ ಮಧು ಬಂಗಾರಪ್ಪ

You are currently viewing BREAKING NEWS : ಶೀಘ್ರವೇ “10,000 ಶಿಕ್ಷಕ”ರ ನೇಮಕಾತಿ : ಸಚಿವ ಮಧು ಬಂಗಾರಪ್ಪ
Minister Madhu Bangarappa

ಪ್ರಜಾ ವೀಕ್ಷಣೆ ಸುದ್ದಿಜಾಲ:-

ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿಗೆ ರಾಜ್ಯ ಸರ್ಕಾರ ಕ್ರಮವಹಿಸಲಾಗಿದೆ. ಶೀಘ್ರವೇ 10,000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಇಂದು ವಿಧಾನ ಪರಿಷತ್ತಿನಲ್ಲಿ ಬಿಜೆಪಿಯ ತಳವಾರ್ ಸಾಬಣ್ಣ ಅವರು ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ಕೊರತೆ ಇದೆ. ಇದೇ ಕಾರಣಕ್ಕಾಗಿ ಫಲಿತಾಂಶ ಕೂಡ ಕುಂಠಿತಗೊಂಡಿದೆ. 19,000 ಶಿಕ್ಷಕರ ಕೊರತೆ ಕಲ್ಯಾಣ ಕರ್ನಾಟಕ ಭಾಗದಲ್ಲಿದೆ. ಇವರ ಮಾತಿಗೆ ಪ್ರತ್ಯುತ್ತರವಾಗಿ ಮಾತನಾಡಿದ ಮಧು ಬಂಗಾರಪ್ಪ ಅವರು, ‘ಈ ಕುರಿತು ಎಲ್ಲಾ ಸಿದ್ಧತೆಗಳನ್ನು ಕೈಗೊಂಡಿದ್ದು, ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದ ನಂತ್ರ, ಪ್ರಕ್ರಿಯೆ ಶುರು ಮಾಡಲಾಗುತ್ತದೆ ಇದಲ್ಲದೇ ಕೊಠಡಿಗಳ ಸಮಸ್ಯೆ ಕೂಡ ಇದೆ. ಇದನ್ನು ಕೂಡಲೇ ಸರಿ ಮಾಡುತ್ತೇವೆ. ಶಿಕ್ಷಣ ಇಲಾಖೆಯಲ್ಲಿ ಸುಮಾರು 50 ಸಾವಿರ ಶಿಕ್ಷಕರ ಕೊರತೆ ಇದೆ. ಈ ಹಿನ್ನಲೆಯಲ್ಲೇ 10 ಸಾವಿರ ಶಿಕ್ಷಕರ ನೇಮಕಕ್ಕೆ ಅನುಮತಿಸುವಂತೆ ಆರ್ಥಿಕ ಇಲಾಖೆಗೆ ಪತ್ರವನ್ನು ಬರೆಯಲಾಗಿದೆ. ಆರ್ಥಿಕ ಇಲಾಖೆಯಿಂದ ಅನುಮತಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತದೆ ಎಂದರು.

 

Leave a Reply

error: Content is protected !!