ಕುಕನೂರು : “ಸಾರ್ವಜನಿಕರ ಅನುಕೂಲತೆಗಾಗಿ ರಾಜ್ಯ ಸರ್ಕಾರದಿಂದ ಜನ ಸ್ಪಂದನಾ ಕಾರ್ಯಕ್ರಮವನ್ನು ಈಗಾಗಲೇ ನಿರ್ದೇಶನ ಮಾಡಿದೆ, ಅದರಂತೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ನಮ್ಮ ಜಿಲ್ಲೆಯಲ್ಲಿ ಅನುಷ್ಠಾನ ಆಗಿವೆ ಎಂದು ಜಿಲ್ಲಾಧಿಕಾರಿ ನಳಿನ್ ಕುಮಾರ್ ಅತುಲ್ ಹೇಳಿದರು.
ಇಂದು ಕುಕನೂರು ತಾಲೂಕಿನ ಮಂಗಳೂರು ಗ್ರಾಮದ ಬಾಪೂಜಿ ಕಾಲೇಜು ಆವರಣದಲ್ಲಿ ಹಮ್ಮಿಕೊಂಡಿದ ತಾಲೂಕು ಮಟ್ಟದ “ಜನ ಸ್ಪಂದನಾ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಈ ಗ್ಯಾರಂಟಿ ಯೋಜನೆಗಳಲ್ಲಿ ಗೃಹ ಲಕ್ಷ್ಮಿ ಯೋಜನೆ ಬಗ್ಗೆ ಸಮಸ್ಯೆಗಳು ಮಹಿಳೆಯರು ದೂರು ನಿಡಿದ್ದಾರೆ. ಸರ್ಕಾರ ಮಟ್ಟದಲ್ಲಿ ಚರ್ಚಿಸಿ ಕೂಡಲೇ ಪರಿಹಾರ ನೀಡುತ್ತೇವೆ. ನಮ್ಮ ಜಿಲ್ಲಾ ಮಟ್ಟದ ಅಧಿಕಾರಿಗಳು ನಿಮ್ಮ ಅಹವಾಲು ಸ್ವೀಕಾರ ಹಾಗೂ ಸಮಸ್ಯೆಯನ್ನು ಆಲಿಸಿ ಪರಿಹಾರ ನೀಡಲಿದ್ದಾರೆ. ಹಾಗಾಗಿ ಸರ್ಕಾರದ ಯೋಜನೆಗಳ ಬಗ್ಗೆ ಸಮಸ್ಯೆಗಳಿದ್ದರೆ, ಈ ಕೂಡಲೇ ಬಗೆಹರಿಸಲಿದ್ದಾರೆ ಎಂದು ಹೇಳಿದರು.
ಇದೆ ವೇಳೆಯಲ್ಲಿ ಜಿಲ್ಲಾಧಿಕಾರಿ ನಳಿನ್ ಅತುಲ್ ವೇದಿಕೆಯಿಂದ ಕೆಳಗೆ ಬಂದು ವೃದ್ದೆಯ ಬಳಿ ಸಮಸ್ಯೆ ಆಲಿಸಿದಿರು. ಜಿಲ್ಲಾಧಿಕಾರಿ ಜೊತೆಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಮ್ ಪಾಂಡೆ, ಎಸ್ ಪಿ ಡಾ. ರಾಮ್ ಎಲ್ ಅರಸಿದ್ಧಿ ಹಾಗೂ ಅಪರ ಜಿಲ್ಲಾಧಿಕಾರಿ, ಸಹಾಯಕ ಆಯುಕ್ತರು ಸಾಥ್ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಮ್ ಪಾಂಡೆ, ಜಿಲ್ಲಾ ವರಿಷ್ಟಾಧಿಕಾರಿ ಡಾ. ರಾಮ್ ಎಲ್ ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ ಕಡಿ, ಉಪ ವಿಭಾಗಧಿಕಾರಿ ಮಹೇಶ್ ಮಾಲಗತ್ತಿ, ತಹಸೀಲ್ದಾರ್ ಪ್ರಾಣೇಶ್ ಬಿ, ಉಪ ತಹಸೀಲ್ದಾರ್ ಮುರಳೀಧರ ಕುಲಕರ್ಣಿ, ತಾ ಪಂ ಕಾರ್ಯನಿರ್ವಾಹಕ ಅಧಿಕಾರಿ ಸಂತೋಷ ಬಿರಾದಾರ್, ಸಿಪಿಐ ಮೌನೇಶ್ ಪಾಟೀಲ್, ಗ್ರಾಮ ಪಂಚಾಯತ್ ಅಧ್ಯಕ್ಷ ಸಕ್ರಪ್ಪ ಚಿನ್ನೂರು, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಾರ್ವಜನಿಕರು ಇದ್ದರು.