PV ನ್ಯೂಸ್ ಡೆಸ್ಕ್ : ಪ್ರಧಾನಿ ನರೇಂದ್ರ ಮೋದಿ ಅವರ 3.0 ಸರ್ಕಾರದ ಮೊದಲ ಕೇಂದ್ರ ಆಯವ್ಯಯ 2024 ಅನ್ನು ಇಂದು ಘೋಷಿಸಲಾಗಿದೆ. ಈ ಬಜೆಟ್ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ್ದು, ತೆರಿಗೆದಾರರಿಗೆ ಹಲವಾರು ಪ್ರಮುಖ ಬದಲಾವಣೆಗಳು ಮತ್ತು ಪರಿಹಾರ ಕ್ರಮಗಳನ್ನು ಹೊಸದಾಗಿ ತಂದಿದ್ದಾರೆ. ಈ ಕುರಿತು ಗಣ್ಯರ ಅನಿಸಿಕೆಗಳು ಹೀಗಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ
“ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ಯಾವುದೇ ಬೇಡಿಕೆಗಳಿಗೂ ಮನ್ನಣೆ ನೀಡದೆ ಕನ್ನಡಿಗರ ಪಾಲಿಗೆ ಅತ್ಯಂತ ನಿರಾಶಾದಾಯಕ ಬಜೆಟ್ ಮಂಡಿಸಿದ್ದಾರೆ. ಕರ್ನಾಟಕದಿಂದಲೇ ಆಯ್ಕೆಯಾಗಿ ಕೇಂದ್ರದಲ್ಲಿ ಸಚಿವರಾಗಿರುವ ಅವರು ರಾಜ್ಯದ ಹಿತವನ್ನು ಸಂಪೂರ್ಣವಾಗಿ ನಿರ್ಲಕ್ಷಿಸುವ ಮೂಲಕ ಅಧಿಕಾರ ಕೊಟ್ಟ ಜನತೆಯ ಕೈಗೆ ಚೊಂಬು ಕೊಟ್ಟಿದ್ದಾರೆ”
ಪ್ರಧಾನ ಮಂತ್ರಿ ನರೇಂದ್ರ ಮೋದಿ
“BudgetForViksitBharat ಸಮಗ್ರ ಬೆಳವಣಿಗೆಯನ್ನು ಖಾತ್ರಿಗೊಳಿಸಿದೆ, ಸಮಾಜದ ಪ್ರತಿಯೊಂದು ವರ್ಗಕ್ಕೂ ಪ್ರಯೋಜನವನ್ನು ನೀಡುತ್ತದೆ ಮತ್ತು ಅಭಿವೃದ್ಧಿ ಹೊಂದಿದ ಭಾರತಕ್ಕೆ ದಾರಿದೀಪವಾಗಿದೆ”
ಲೋಕಸಭೆಯ ವಿರೋಧ ಪಕ್ಷದ ನಾಯಕ, ರಾಹುಲ್ ಗಾಂಧಿ
Congress leader Rahul Gandhi
“ಮಿತ್ರ ರಾಜ್ಯಗಳನ್ನು ಸಮಾಧಾನಪಡಿಸಿದ ನಿರ್ಮಲಾ ಸೀತಾರಾಮನ್ ಬಜೆಟ್, ಇತರ ರಾಜ್ಯಗಳ ತೆರಿಗೆಯಲ್ಲಿ ಅವರಿಗೆ ಪೋಳ್ಳು ಭರವಸೆಗಳನ್ನು ನೀಡಿ, ಆಪ್ತರನ್ನು ಸಮಾಧಾನಪಡಿಸಿದೆ. ಸಾಮಾನ್ಯ ಭಾರತೀಯರಿಗೆ ಯಾವುದೇ ಪರಿಹಾರವಿಲ್ಲದೆ ಎನ್‌ಡಿಎ ಒಕ್ಕೂಟದ ಮಿತ್ರ ಪಕ್ಷಗಳಿಗೆ ಪ್ರಯೋಜನೆಯಾದ ಬಜೆಟ್. ಈ ಹಿಂದಿನ ಕಾಂಗ್ರೆಸ್ ಪ್ರಣಾಳಿಕೆ ಮತ್ತು ಬಜೆಟ್‌ನ್ನೇ ಸಂಪೂರ್ಣ ಕಾಪಿ ಮತ್ತು ಪೇಸ್ಟ್ ಮಾಡಲಾಗಿದೆ”
ವಿರೋಧ ಪಕ್ಷದ ನಾಯಕ, ಆರ್. ಅಶೋಕ್
“ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸತತ 7ನೇ ಬಾರಿಗೆ ಬಜೆಟ್ ಮಂಡಿಸುವ ಮೂಲಕ ದಾಖಲೆ ಬರೆದಿದ್ದು, ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಅವರ ನೇತೃತ್ವದ 3.0 ವಿಕಸಿತ ಭಾರತ ಬಜೆಟ್ 2024-25 ರಲ್ಲಿ ಅನ್ನದಾತ, ಬಡವ ಹಾಗೂ ಮಹಿಳೆ ಸೇರಿದಂತೆ ಈ 9 ಕ್ಷೇತ್ರಗಳಿಗೆ ಪ್ರಮುವಾಗಿ ಆದ್ಯತೆ ನೀಡಲಾಗಿದೆ. ಕೌಶಲ್ಯ, ಮಧ್ಯಮವರ್ಗ, ನಿರುದ್ಯೋಗ, ಎಮ್ ಎಸ್ ಎಮ್ ಇ ಕ್ಷೇತ್ರಗಳಿಗೂ ಒತ್ತು ನೀಡಲಾಗಿದೆ”
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್
“ಇದು 100% ಬಿಜೆಪಿ ಬಚಾವೋ ಬಜೆಟ್!”
“ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರ ಮೇಲೆ ನಾವು ನಂಬಿಕೆ ಇಟ್ಟಿದ್ದೆವು. ಆದರೆ ಆಂಧ್ರಪ್ರದೇಶ ಹಾಗೂ ಬಿಹಾರ ರಾಜ್ಯಗಳಿಗೆ ಮಣೆ ಹಾಕುವ ಮೂಲಕ ಸರ್ಕಾರವನ್ನು ಉಳಿಸಿಕೊಳ್ಳುವ ಯತ್ನ ಮಾಡಲಾಗಿದೆ ಅಷ್ಟೆ. ಕರ್ನಾಟಕಕ್ಕೆ ಎಂದಿನಂತೆ ಕೇಂದ್ರ ಬಿಜೆಪಿ ಸರ್ಕಾರ ಮಲತಾಯಿ ಧೋರಣೆ ತೋರುವುದನ್ನು ಮುಂದುವರಿಸಿದೆ. ವಿಶೇಷವಾಗಿ ಕಾಂಗ್ರೆಸ್ ಆಡಳಿತದಲ್ಲಿರುವ ರಾಜ್ಯಗಳಿಗೆ ಅನ್ಯಾಯವಾಗಿದೆ. ರಾಜ್ಯದಲ್ಲಿ ಬಾಕಿ ಇರುವ ಯಾವುದೇ ಪ್ರಮುಖ ಯೋಜನೆಗಳಿಗೆ ಹಣ ಬಿಡುಗಡೆ ಮಾಡಿಲ್ಲ. ಪ್ರಸಕ್ತ ಸಾಲಿನ ಬಜೆಟ್ ಅನ್ನು ಕನ್ನಡಿಗರಿಗೆ ಮಾಡಿರುವ ಮಹಾ ದ್ರೋಹ ಎಂದು ಒಂದೇ ಸಾಲಿನಲ್ಲಿ ಹೇಳಬಹುದು
ರಾಜ್ಯ ಬಿಜೆಪಿ ಅಧ್ಯಕ್ಷ, ಬಿ.ವೈ. ವಿಜಯೇಂದ್ರ
“ಲೋಕಸಭೆಯಲ್ಲಿ ಇಂದು ಮಂಡಿಸಲಾದ 2024-25ನೇ ಸಾಲಿನ ಬಜೆಟ್ ನಲ್ಲಿ ಶಿಕ್ಷಣ, ಉದ್ಯೋಗ, ಕೌಶಲ್ಯಾಭಿವೃದ್ಧಿಗಾಗಿ 1.48 ಲಕ್ಷ ಕೋಟಿ ಮೀಸಲಿಡುವುದಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಅವರು ಘೋಷಣೆ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿಜೀ ಅವರ ಸಂಕಲ್ಪದ ವಿಕಸಿತ ಭಾರತದ ನಿರ್ಮಾಣಕ್ಕೆ ಉತ್ತಮ ಅಡಿಪಾಯ ಹಾಕಿದ್ದಾರೆ”