PV ನ್ಯೂಸ್ ಡೆಸ್ಕ್ : ಕುಕನೂರು ತಾಲೂಕಿನ ಮಂಗಳೂರು ಗ್ರಾಮದಲ್ಲಿ ತಾಲೂಕು ಮಟ್ಟದ “ಜನ ಸ್ಪಂದನಾ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವೂ ಕಳೆದ ಜುಲೈ 2 ರಂದು ಜಿಲ್ಲಾಧಿಕಾರಿ ನಳಿನ್ ಅತುಲ್ ಅವರ ನೇತೃತ್ವದಲ್ಲಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಮ್ ಪಾಂಡೆ, ಜಿಲ್ಲಾ ವರಿಷ್ಟಾಧಿಕಾರಿ ಡಾ. ರಾಮ್ ಎಲ್ ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ ಕಡಿ, ಉಪ ವಿಭಾಗಧಿಕಾರಿ ಮಹೇಶ್ ಮಾಲಗತ್ತಿ ಸಮ್ಮುಖದಲ್ಲಿ ಮಂಗಳೂರು ಗ್ರಾಮದ ಬಾಪೂಜಿ ಬಿ.ಎಡ್. ಕಾಲೇಜು ಆವರಣದಲ್ಲಿ ನಡೆದಿತ್ತು.
ಇದೇ ವೇಳೆಯಲ್ಲಿ ತಹಸೀಲ್ದಾರ್ ಪ್ರಾಣೇಶ್ ಬಿ, ಉಪ ತಹಸೀಲ್ದಾರ್ ಮುರಳೀಧರ ಕುಲಕರ್ಣಿ, ತಾ ಪಂ ಕಾರ್ಯನಿರ್ವಾಹಕ ಅಧಿಕಾರಿ ಸಂತೋಷ ಬಿರಾದಾರ್, ಸಿಪಿಐ ಮೌನೇಶ್ ಪಾಟೀಲ್, ಗ್ರಾಮ ಪಂಚಾಯತ್ ಅಧ್ಯಕ್ಷ ಸಕ್ರಪ್ಪ ಚಿನ್ನೂರು, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಾರ್ವಜನಿಕರು ಇದ್ದರು.
ಈ ಸಂದರ್ಭದಲ್ಲಿ ಇಲಾಖಾವಾರು ಸಲ್ಲಿಕೆಯಾದ ಅರ್ಜಿಗಳು ವಿವರಗಳು ಹೀಗಿವೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 62 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಅದರಂತೆ ಕಂದಾಯ ಇಲಾಖೆ 51, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ 1 ಅರ್ಜಿಯನ್ನು ಸ್ಥಳದಲ್ಲೇ ವಿಲೇವಾರಿ ಮಾಡಿದ್ದಾರೆ. ಇನ್ನು 9 ಅರ್ಜಿಗಳು ಪ್ರಗತಿಯಲ್ಲಿದೆ, 4 ಅರ್ಜಿಗಳು ನೋಂದಣಿಯಾಗಿದ್ದು, ಒಟ್ಟು 14 ಅರ್ಜಿಗಳು ಬಂದಿವೆ. ಇಂಧನ ಇಲಾಖೆ 10, ಕೃಷಿ ಇಲಾಖೆ 9, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 9, ಸಾರ್ವಜನಿಕ ಸಂಪರ್ಕ ಇಲಾಖೆ 7, ಸಾರಿಗೆ ಇಲಾಖೆ 7, ಸಮಾಜ ಕಲ್ಯಾಣ ಇಲಾಖೆ 4 ಅರ್ಜಿಗಳು ಬಂದಿವೆ.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ 4, ಉನ್ನತ ಶಿಕ್ಷಣ ಇಲಾಖೆ 4, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ 3, ನೀರಾವರಿ ಇಲಾಖೆ 3, ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ 2, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ 2, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ 2, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ 1, ಅರಣ್ಯ, ಪರಿಸರ ಮತ್ತು ಪರಿಸರ ಇಲಾಖೆ 1, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ 1, ವಸತಿ ಇಲಾಖೆ 1, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ 1, ನಗರಾಭಿವೃದ್ಧಿ ಇಲಾಖೆ 1, ಜಲಸಂಪನ್ಮೂಲ ಇಲಾಖೆ ಒಂದರಂತೆ ಹೀಗೆ ಎಲ್ಲಾ ಇಲಾಖೆಗಳಲ್ಲಿ ಒಟ್ಟು 201 ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಅಧಿಕೃತ ಮಾಹಿತಿ ಲಭ್ಯವಾಗಿದೆ.
ಆದಷ್ಟು ಬೇಗ ಈ ಎಲ್ಲಾ ಅರ್ಜಿಗಳು ವಿಲೇವಾರು ಮಾಡಿ ಸೂಕ್ತ ಪರಿಹಾರ ಒದಗಿಸಿಕೊಡುವ ಜವಾಬ್ದಾರಿ ಆಧಿಕಾರಿಗಳ ಮೇಲಿದೆ ಎಂದು ಸಾರ್ವಜನಿಕರ ಅಭಿಪ್ರಾಯವಿದೆ.