ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ : IAS, KAS ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ..!!

You are currently viewing ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ : IAS, KAS ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ..!!

ಪ್ರಜಾ ವೀಕ್ಷಣೆ ಸುದ್ದಿಜಾಲ:-

PV ನ್ಯೂಸ್ ಡೆಸ್ಕ್ : 2024-25ನೇ ಸಾಲಿನಲ್ಲಿ ಐಎಎಸ್, ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಗೆ ಪರೀಕ್ಷಾ ಪೂರ್ವ ತರಬೇತಿ ನೀಡಲು ಅಲ್ಪಸಂಖ್ಯಾತರ ಸಮುದಾಯದವರಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ನಿರ್ದೇಶನಾಲಯ ತಿಳಿಸಿದೆ.

ಬೆಂಗಳೂರು ನಗರದಲ್ಲಿ ನಿರ್ಮಿಸಿರುವ ಹಜ್ ಭವನದಲ್ಲಿ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಗೆ 10 ತಿಂಗಳ ವಸತಿ ಸಹಿತ ಐ.ಎ.ಎಸ್. ಕೆ.ಎ.ಎಸ್. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿಯನ್ನು ಪ್ರತಿಷ್ಠಿತ ಸಂಸ್ಥೆಗಳ ಮೂಲಕ ನೀಡಲು ಉದ್ದೇಶಿಸಲಾಗಿದೆ ಎಂದು ಮಾಹಿತಿ ಇದೆ. ಸ್ಪರ್ಧಾತ್ಮಕ ಪರಿಕ್ಷೇಗಳ ತರಬೇತಿಗೆ ರಾಜ್ಯಾದ್ಯಾಂತ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ಆರ್ಥಿಕ ಹೊರೆ ತಪ್ಪಿಸಲು ಅಭ್ಯರ್ಥಿಗಳ ಸುರಕ್ಷತಾ ಹಿತದೃಷ್ಟಿಯಿಂದ ಕಲಕಾ ಪೂರಕ ವಾತಾವರಣ ಒದಗಿಸಲು ಉತ್ತಮ ಫಲಿತಾಂಶ ಮತ್ತು ಸರ್ಕಾರಿ ಉದ್ಯೋಗ ಪಡೆದುಕೊಳ್ಳಲು ಅನುಕೂಲವಾಗುವಂತೆ ಐ.ಎ.ಎಸ್/ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಗೆ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುವುದು.

ಆದ್ದರಿಂದ ಈ ತರಬೇತಿಗೆ ಅರ್ಜಿ ಸಲ್ಲಿಸಲು ಸೇವಾಸಿಂಧು https:/sevasindhu.karnataka.gov.in ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹತೆಗಳ ಕುರಿತಾದ ವಿವರವನ್ನು ಈ ಪತ್ರದೊಂದಿಗೆ ಲಗತ್ತಿಸಿದ್ದು, ಸದರಿ ವಿಷಯದ ಮಾಹಿತಿ ಬಗ್ಗೆ ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ವ್ಯಾಪಕ ಪ್ರಚಾರ ಕೈಗೊಂಡು ಅರ್ಹ ಅಲ್ಪಸಂಖ್ಯಾತರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕ್ರಮವಹಿಸುವಂತೆ ಸೂಚಿಸಿದೆ.

ವಿಶೇಷ ಸೂಚನೆ :-  ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ವೆಬ್‌ಸೈಟ್ www.dom.karnataka.gov.in ರಲ್ಲಿ ಸಹಾಯವಾಣಿ ಸಂಖ್ಯೆ: 8277799990 ಕರೆಮಾಡಿ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕವು ಜುಲೈ 24 ಆಗಸ್ಟ್ 31 ವರೆಗೆ ಎಂದು ತಿಳಿಸಿದೆ.

Leave a Reply

error: Content is protected !!