BIG BREAKING : ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತೊಂದು ದೊಡ್ಡ ಸಂಕಷ್ಟ..!

You are currently viewing BIG BREAKING : ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತೊಂದು ದೊಡ್ಡ ಸಂಕಷ್ಟ..!

ಪ್ರಜಾ ವೀಕ್ಷಣೆ ಸುದ್ದಿಜಾಲ:-

PV ನ್ಯೂಸ್ ಡೆಸ್ಕ್ , ಬೆಂಗಳೂರು : ರಾಜ್ಯದಲ್ಲಿ ಇತ್ತೀಚೆಗೆ ಮುಡಾ ಅಕ್ರಮ ಭಾರೀ ಸದ್ದು ಮಾಡುತ್ತಿದ್ದು, ಈ ಬಗ್ಗೆ ಚರ್ಚೆ ನಡೆಸಲು ಸದನದಲ್ಲಿ ಅವಕಾಶ ನೀಡದಿದ್ದಕ್ಕೇ ಬಿಜೆಪಿ-ಜೆಡಿಎಸ್ ಸದಸ್ಯರಿಂದ ಸದನದಲ್ಲೇ ಅಹೋರಾತ್ರಿ ಧರಣಿ ನಡೆಸಿದ್ದರು. ಈ ನಂತರ ಇಂದು ರಾಜ್ಯಪಾಲರನ್ನು ಭೇಟಿಯಾಗಿ ಮುಡಾ ಅಕ್ರಮದ ಬಗ್ಗೆ ವಿರೋಧ ಪಕ್ಷಗಳಿಂದ ದೂರು ನೀಡಲಾಗಿದೆ ಎಂದು ತಿಳಿದು ಬಂದಿದೆ.

ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ…👇

ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ : IAS, KAS ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ..!!

ಇಂದು ವಿಧಾನಸೌಧದಿಂದ ಪಾದಯಾತ್ರೆಯ ಮೂಲಕ ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಜೆಡಿಎಸ್ ನಾಯಕರು, ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾದರು. ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಗಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು “ಮುಡಾ ಅಕ್ರಮ”ದ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಿದರು. ಅದು ಅಲ್ಲದೇ ಈ ಅಕ್ರಮದ ಬಗ್ಗೆ ಸೂಕ್ತ ಸೂಚನೆ ನೀಡುವಂತೆ ರಾಜ್ಯಪಾಲರನ್ನು ಕೋರಿದರು.

ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ… 👇

LOCAL BREAKING : ತಳಕಲ್ ಗ್ರಾಮದಲ್ಲಿ ಭಾರೀ ಮೌಲ್ಯದ ಚಿನ್ನಭರಣ ಕಳ್ಳತನ..!! 

ಈ ಬಗ್ಗೆ ರಾಜ್ಯದ ಕಾಂಗ್ರೆಸ್ ಸರಕಾರವು ಇಂದು ಸದನದಲ್ಲಿ ಮುಡಾ ವಿಚಾರದಲ್ಲಿ ಅವಕಾಶ ನೀಡದೆ ಇರುವುದನ್ನು ಖಂಡಿಸಿ ಬಿಜೆಪಿ-ಜೆಡಿಎಸ್ ನಾಯಕರು “ರಾಜಭವನ ಚಲೋ” ನಡೆಸಿದರು. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಶ್ರೀ ಸುರೇಶ್ ಬಾಬು, ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಉಪಸ್ಥಿತರಿದ್ದರು.

Leave a Reply

error: Content is protected !!