ಹೊಸಪೇಟೆ (ವಿಜಯನಗರ) : 2024-25ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ವಿವಿಧ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳಡಿಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಭೌತಚಿಕಿತ್ಸಕರು 1 ಹುದ್ದೆ, ಬ್ಲಾಕ್ ಎಪಿಡೆಮಿಯೋಲೊಜಿಸ್ಟ್ (ಬಿಪಿಹೆಚ್‌ಯು) 1 ಹುದ್ದೆ, ಜಿಲ್ಲಾ ಆರೋಗ್ಯ ಮತ್ತು ಕ್ಷೇಮಕೇಂದ್ರ ಕಾರ್ಯಕ್ರಮ ಸಂಯೋಜಕರು 1 ಹುದ್ದೆ, ಕಿರಿಯ ಆರೋಗ್ಯ ಸಹಾಯಕರು (ನಮ್ಮ ಕ್ಲಿನಿಕ್) 6 ಹುದ್ದೆಗಳು, ಆಪ್ತ ಸಮಾಲೋಚಕರು (ಆರ್.ಎಮ್.ಎನ್.ಸಿ.ಹೆಚ್) 1 ಹುದ್ದೆ ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://healthsecretariat.karnataka.gov.in/ ಗೆ ಸಂಪರ್ಕಿಸಬಹುದು.
ಹುದ್ದೆಗಳ ಸಂಖ್ಯೆಯಲ್ಲಿ ಹೆಚ್ಚುಗೊಳಿಸುವುದು ಅಥವಾ ಕಡಿಮೆಗೊಳಿಸುವುದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ನಿರ್ಧಾರದಂತಿರುತ್ತದೆ. ಆಯ್ಕೆಯ ಪ್ರಕ್ರಿಯೆ ಯಾವುದೇ ಬದಲಾವಣೆಯಾದರು ಆಯ್ಕೆ ಸಮಿತಿ ತೀರ್ಮಾನವೇ ಅಂತಿಮವಾಗಿರುತ್ತದೆ. ಕೋವಿಡ್-19ರಲ್ಲಿ ಸರ್ಕಾರಿ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸದವರಿಗೆ ಆದ್ಯತೆ ನೀಡಲಾಗುವುದು, 6 ತಿಂಗಳವರೆಗೆ ಸೇವೆ ಸಲ್ಲಿಸಿದವರಿಗೆ ಶೇಕಡ 2ರಷ್ಟು ಕೃಪಾಂಕ, 6 ತಿಂಗಳು 1 ದಿನದಿಂದ 12 ತಿಂಗಳವರೆಗೆ ಸೇವೆ ಸಲ್ಲಿಸಿದವರಿಗೆ ಶೆ.4ರಷ್ಟು ಕೃಪಾಂಕ, 12 ತಿಂಗಳು 1 ದಿನದಿಂದ 18 ತಿಂಗಳವರೆಗೆ ಸೇವೆ ಸಲ್ಲಿಸಿದವರಿಗೆ ಶೇ.6ರಷ್ಟು ಕೃಪಾಂಕ, 18 ತಿಂಗಳು 1 ದಿನದಿಂದ 24 ತಿಂಗಳವರೆಗೆ ಸೇವೆ ಸಲ್ಲಿಸಿದವರಿಗೆ ಶೇ.8ರಷ್ಟು ಕೃಪಾಂಕ ನೀಡಲಾಗುವುದು. ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಶೇಕಡ ಮತ್ತು ಕೋವಿಡ್-19 ಸೇವಾ ಅವಧಿಯ ಕೃಪಾಂಕವನ್ನು ಒಟ್ಟುಗೂಡಿಸಿ ಮೆರಿಟ್ ಲೀಸ್ಟನ್ನು ತಯಾರಿಸಲಾಗುವುದು ಮತ್ತು ಹೊಸ ರೋಸ್ಟರ್ ಆಧಾರದ ಮೇಲೆ ಮೇರಿಟ್ ಕಂ ರೋಸ್ಟರ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ನೇಮಕಾತಿ ಮಾಡಲಾಗುವುದು.
ಈ ವಿವಿಧ ಹುದ್ದೆಗಳಿಗೆ ನಿಯಾಮಾನುಸಾರ ಕಂಪ್ಯೂಟರ್‌ನ ಸಾಕ್ಷರತೆಯನ್ನು ಕಡ್ಡಾಯವಾಗಿ ಹೊಂದಿರತಕ್ಕದ್ದು, ಸರ್ಕಾರದ ಮಾನ್ಯತೆ ಪಡೆದ ಸಂಸ್ಥೆಯಿAದ ಪ್ರಮಾಣ ಪತ್ರ ಹೊಂದಿರಬೇಕು. (ತಜ್ಞ ವೈದ್ಯರು, ಮತ್ತು ಗ್ರೂಪ್ ಡಿ) ಹುದ್ದೆಗಳಿಗೆ ಅನ್ವಯಿಸುವುದಿಲ್ಲ, ಭೌತಚಿಕಿತ್ಸಕರು, ಜಿಲ್ಲಾ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಾರ್ಯಕ್ರಮ ಸಂಯೋಜಕರು, ಬ್ಲಾಕ್ ಎಪಿಡೆಮಿಯೋಲೊಜಿಸ್ಟ್ (ಬಿಪಿಹೆಚ್‌ಯು), (ಸಿಪಿಹೆಚ್‌ಸಿ-ಯುಹೆಚ್‌ಸಿ) ಹುದ್ದೆಗಳ ಸಂಖ್ಯೆ ತುಂಬುವವರೆಗೂ ಪ್ರತಿ ಮಂಗಳವಾರ ವಾಕ್‌ಇನ್ ಮೂಲಕ ಆಯ್ಕೆ ಪ್ರಕ್ರಿಯೆ ಮಾಡಲಾಗುವುದು.
ಅರ್ಜಿಗಳನ್ನು ಸ್ವೀಕರಿಸಲು ಅಗಸ್ಟ್ 3 ರವರೆಗೆ ಅವಕಾಶವಿರಲಿದೆ. ಅರ್ಜಿಗಳನ್ನು ಕಚೇರಿಯ ಸಮಯದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳ ಕಚೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯ 60 ಹಾಸಿಗೆಯ ಎಮ್.ಸಿ.ಹೆಚ್ ಆಸ್ಪತ್ರೆ ಹಿಂಭಾಗ ಮಸೀದಿ ಹತ್ತಿರ ಹೊಸಪೇಟೆ ಇಲ್ಲಿ ಅಗಸ್ಟ್ 3ರ ಸಂಜೆ 5.30 ರೊಳಗೆ ಸ್ವೀಕರಿಸಲಾಗುವುದು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಸಂಘದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹುದ್ದೆಗಳ ವಿವರ, ಕನಿಷ್ಟ ವಿದ್ಯಾರ್ಹತೆ ಮತ್ತು ಆಯ್ಕೆ ವಿಧಾನ, ಒಟ್ಟು ಹುದ್ದೆಗಳು, ಮೀಸಲಾತಿಯ ವಿವರ, ಮಾಸಿಕ ಸಂಚಿತ ವೇತನ ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಈ ಕಚೇರಿಯ ಸೂಚನಾ ಫಲಕದಲ್ಲಿ ಪ್ರಚುರಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.