ಗೃಹಲಕ್ಷ್ಮಿಯರಿಗೆ ಸಿಹಿ ಸುದ್ದಿ ಕೊಟ್ಟ ಸಿ. ಎಂ ಸಿದ್ದರಾಮಯ್ಯ : ಕೆಲವೇ ದಿನಗಳಲ್ಲಿ 2 ತಿಂಗಳ ಗೃಹಲಕ್ಷ್ಮಿ ಹಣ ಜಮೆ.!!
ರಾಜ್ಯ ಸರ್ಕಾರದ ಮಹತ್ವಕಾಂಕ್ಷೀ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಹಣ ಎರಡು ತಿಂಗಳಿನಿಂದಲೂ ಜಮೆ ಆಗದೇ ಬಾಕಿ ಇದೆ. ಗೃಹಲಕ್ಷ್ಮೀಯರಿಗೆ ಇಂದು ಮಹತ್ವದ ಸಂದೇಶ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಕಿ ಇರುವ ಎರಡೂ ತಿಂಗಳ ಹಣವನ್ನು ಒಟ್ಟಿಗೆ ಜಮೆ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಕೆಲವೇ ದಿನಗಳಲ್ಲಿ ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಯ ಉಳಿದ ತಿಂಗಳ ಹಣ ಪಲಾನುಭವಿಗಳ ಖಾತೆಗೆ ಒಂದೇ ಬಾರಿಗೆ ಜಮೆ ಆಗಲಿದೆ ಎಂದು ಹೇಳಿದ್ದಾರೆ.
ಇಂದು ಶುಕ್ರವಾರ ಸಿ ಎಂ ಸಿದ್ದರಾಮಯ್ಯ ಅವರು ಮಡಿಕೇರಿಯಲ್ಲಿ ನೆರೆಹಾನಿ ಪ್ರದೇಶಗಳ ವೀಕ್ಷಣೆ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತ ಈ ಮಾಹಿತಿ ತಿಳಿಸಿದ್ದಾರೆ.
ಮೇ ತಿಂಗಳ ಗೃಹಲಕ್ಷ್ಮೀ ಹಣ ಯಜಮಾನಿಯರ ಖಾತೆಗೆ ಜಮೆ ಮಾಡಲಾಗಿದೆ. ಉಳಿದ ಜೂನ್, ಜುಲೈ ತಿಂಗಳ 2000 ಹಣವನ್ನು ಒಟ್ಟಿಗೆ ಪಾವತಿ ಮಾಡುವಂತೆ ಸೂಚಿಸಲಾಗಿದೆ. ಕೆಲವೇ ದಿನಗಳಲ್ಲಿ 2 ತಿಂಗಳ ಗೃಹಲಕ್ಷ್ಮಿ ಬಾಕಿ ಹಣ ಯಜಮಾನಿಯರ ಖಾತೆಗೆ ಜಮೆ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಹಿ ಸುದ್ದಿ ಕೊಟ್ಟಿದ್ದಾರೆ..
— ಪ್ರಜಾವೀಕ್ಷಣೆ ಸುದ್ದಿ ಜಾಲ..