ಹೊಸಪೇಟೆ (ವಿಜಯನಗರ) : ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹೊಸಪೇಟೆ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಾರ್ತಾ ಮತ್ತು ಸಾರ್ವನಿಕ ಸಂಪರ್ಕ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 8ರಂದು ಬೆಳಗ್ಗೆ 9 ಗಂಟೆಗೆ ಹೊಸಪೇಟೆಯ ವಾಸವಿ ಪ್ರೌಡ ಶಾಲೆಯಲ್ಲಿ ಬಾಲ್ಯ ವಿವಾಹ ನಿಷೇಧ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳನ್ನು ರಕ್ಷಿಸುವ ಕಾಯ್ದೆ-2012ರ ಕಾನೂನು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಗೌರವಾನ್ವಿತ ಅಪರ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಮೇಶ್ ಬಾಬು ಬಿ.ಎನ್ ಅವರು ಕಾರ್ಯಕ್ರಮವನ್ನು ಉಧ್ಘಾಟಿಸುವರು, ವಾಸವಿ ಪ್ರೌಡ ಶಾಲೆಯ ಮುಖ್ಯೋಪಾಧ್ಯಯರಾದ ಡಾ. ಯತ್ನಳ್ಳಿ ಮಲ್ಲಯ್ಯ ಇವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಹೊಸಪೇಟೆಯ ಗೌರವಾನ್ವಿತ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಪ್ರಶಾಂತ್ ನಾಗಲಾಪುರ್, ವಕೀಲರ ಸಂಘದ ಅಧ್ಯಕ್ಷರಾದ ಕೆ. ಪ್ರಹ್ಲಾದ್, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಪಿ. ಶ್ರೀನಿವಾಸಮೂರ್ತಿ, ಕ್ಷೇತ್ರ ಶಿಕ್ಷಣ ಇಲಾಖೆಯ ಚನ್ನಬಸಪ್ಪ., ಗ್ರಾಮೀಣ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷರಾದ ಗುರುರಾಜ್ ಕಟ್ಟಿಮನಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಗವಿಸಿದ್ದಪ್ಪ ಹೊಸಮನಿ ಹಾಗೂ ಸಂಪನ್ಮೂಲ ವ್ಯಕ್ತಿಗಳಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಸಿಂಧು ಅಂಗಡಿ, ಕಾನೂನು ಪರಿವೀಕ್ಷಣಾಧಿಕಾರಿಗಳಾದ ಶ್ರೀಕಾಂತ್ ಇವರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.