BIG BREAKING : ಕಾನೂನು ಬಾಹಿರ ಪ್ರತಿಭಟನೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆಶಿಗೆ ಭಾರೀ ಸಂಕಷ್ಟ..!!

You are currently viewing BIG BREAKING : ಕಾನೂನು ಬಾಹಿರ ಪ್ರತಿಭಟನೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆಶಿಗೆ ಭಾರೀ ಸಂಕಷ್ಟ..!!

ಪ್ರಜಾ ವೀಕ್ಷಣೆ ಸುದ್ದಿಜಾಲ:

PV ನ್ಯೂಸ್ ಡೆಸ್ಕ್- ಬೆಂಗಳೂರು : ಲೋಕಸಭೆ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್‌ ಹಿರಿಯ ನಾಯಕ ರಾಹುಲ್ ಗಾಂಧಿ ವಿರುದ್ಧ ಇಡಿ ವಿಚಾರಣೆಯನ್ನು ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ “ಕಾನೂನು ಬಾಹಿರ ಪ್ರತಿಭಟನೆ” ಎಂಬ ಹಿನ್ನೆಲೆಯಲ್ಲಿ ವಿಲ್ಸನ್ ಗಾರ್ಡನ್ ಪೊಲೀಸರು ಈ ಹಿಂದೆ ಕೇಸ್ ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ಬೆಂಗಳೂರಿನ 42ನೇ ಎ.ಸಿ.ಎಂ.ಎಂ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ ಎಂದು ತಿಳಿದು ಬಂದಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಇಡಿ ವಿಚಾರಣೆ ಖಂಡಿಸಿ ರಾಜ್ಯ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು, ಇದು ಕಾನೂನು ಬಾಹಿರ ಪ್ರತಿಭಟನೆ ಹಿನ್ನೆಲೆಯಲ್ಲಿ ವಿಲ್ಸನ್ ಗಾರ್ಡನ್ ಪೊಲೀಸರು ಕೆಸ್ ದಾಖಲಿಸಿದ್ದರು. ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಗೆ ಬೆಂಗಳೂರಿನ 42ನೇ ಎಸಿಎಂಎಂ ಸಮನ್ಸ್ ನೀಡಲಾಗಿದ್ದು, ಆಗಸ್ಟ್ 29 ರಂದು ಖುದ್ದಾಗಿ ಹಾಜರಾಗುವಂತೆ ಇಬ್ಬರು ನಾಯಕರಿಗೆ ಇದೀಗ ಸಮನ್ಸ್ ನೀಡಲಾಗಿದೆ.

Leave a Reply

error: Content is protected !!