PV ನ್ಯೂಸ್ ಡೆಸ್ಕ್- ಬೆಂಗಳೂರು : ಲೋಕಸಭೆ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ವಿರುದ್ಧ ಇಡಿ ವಿಚಾರಣೆಯನ್ನು ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ “ಕಾನೂನು ಬಾಹಿರ ಪ್ರತಿಭಟನೆ” ಎಂಬ ಹಿನ್ನೆಲೆಯಲ್ಲಿ ವಿಲ್ಸನ್ ಗಾರ್ಡನ್ ಪೊಲೀಸರು ಈ ಹಿಂದೆ ಕೇಸ್ ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ 110 ಕಾಂಗ್ರೆಸ್ ನಾಯಕರು ಖುದ್ಧು ವಿಚಾರಣೆಗೆ ಹಾಜರಾಗುವಂತೆ ಗೆ ಬೆಂಗಳೂರಿನ 42ನೇ ಎ.ಸಿ.ಎಂ.ಎಂ ನ್ಯಾಯಾಲಯ ಸಮನ್ಸ್ ನೀಡಿದೆ ಎಂದು ತಿಳಿದು ಬಂದಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಇಡಿ ವಿಚಾರಣೆ ಖಂಡಿಸಿ ರಾಜ್ಯ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು, ಇದು ಕಾನೂನು ಬಾಹಿರ ಪ್ರತಿಭಟನೆ ಹಿನ್ನೆಲೆಯಲ್ಲಿ ವಿಲ್ಸನ್ ಗಾರ್ಡನ್ ಪೊಲೀಸರು ಕೆಸ್ ದಾಖಲಿಸಿದ್ದರು. ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವ ಎಂ.ಬಿ ಪಾಟೀಲ್ ಸೇರಿದಂತೆ 110 ಕಾಂಗ್ರೆಸ್ ನಾಯಕರಿಗೆ ಆಗಸ್ಟ್.29ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ. ಈ ಮೂಲಕ ರಾಜ್ಯದ ಕಾಂಗ್ರೆಸ್ ನಾಯಕರಿಗೆ ಬಿಗ್ ಶಾಕ್ ನೀಡಲಾಗಿದೆ.