VIJAYANAGAR NEWS : ಉತ್ತಮ ಸಮಾಜ ರೂಪಿಸುವುದು ನಮ್ಮೆಲ್ಲರ ಜವಾಬ್ದಾರಿ : ನ್ಯಾ.ರಮೇಶ್ ಬಾಬು ಬಿ.ಎನ್. ಸಲಹೆ

You are currently viewing VIJAYANAGAR NEWS : ಉತ್ತಮ ಸಮಾಜ ರೂಪಿಸುವುದು ನಮ್ಮೆಲ್ಲರ ಜವಾಬ್ದಾರಿ : ನ್ಯಾ.ರಮೇಶ್ ಬಾಬು ಬಿ.ಎನ್. ಸಲಹೆ
oppo_1024

ಹೊಸಪೇಟೆ (ವಿಜಯನಗರ) : ಉತ್ತಮವಾದ ಸಮಾಜ ರೂಪಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಸಮಾಜದ ಮುಖ್ಯ ಭಾಗವಾಗಿರುವ ಮಕ್ಕಳಿಗು ಸಹ ಕಾನೂನಿನ ಅರಿವು ಮೂಡಿಸುವುದರಿಂದ ಒಳ್ಳೆಯ ಸಮಾಜ ರೂಪಿಸುವಲ್ಲಿ ಎಲ್ಲರೂ ಸೇರಿ ದಿಟ್ಟ ಹೆಜ್ಜೆ ಇಟ್ಟಂತಾಗುತ್ತದೆ ಎಂದು ಗೌರವಾನ್ವಿತ ಅಪರ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಮೇಶ್ ಬಾಬು ಬಿ.ಎನ್.ಅವರು ಹೇಳಿದರು.

oppo_1024

ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹೊಸಪೇಟೆ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಾರ್ತಾ ಮತ್ತು ಸಾರ್ವನಿಕ ಸಂಪರ್ಕ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 8ರಂದು ನಗರದ ವಾಸವಿ ಪ್ರೌಢಶಾಲೆಯಲ್ಲಿ ನಡೆದ ಬಾಲ್ಯ ವಿವಾಹ ನಿಷೇಧ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳನ್ನು ರಕ್ಷಿಸುವ ಕಾಯ್ದೆ-2012ರ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮುಖ್ಯವಾಗಿ ಮಕ್ಕಳಿಗೆ ಬಾಲ್ಯ ವಿವಾಹ ನಿಷೇಧ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳನ್ನು ರಕ್ಷಿಸುವ ಕಾಯ್ದೆಗಳ ಅರಿವಿರಬೇಕು. 18 ವರ್ಷದ ಒಳಗಿನ ಪ್ರತಿ ಮಕ್ಕಳಿಗೆ ಈ ಕಾನೂನುಗಳು ರಕ್ಷಣೆ ನೀಡುವಲ್ಲಿ ಮುಖ್ಯ ಪಾತ್ರವಹಿಸುತ್ತವೆ. ಮಕ್ಕಳು ಕಾನೂನುಗಳ ಬಗ್ಗೆ ತಿಳಿದರೆ ಬಾಲ್ಯ ವಿವಾಹ, ಮಕ್ಕಳ ಮೇಲಾಗುವ ಲೈಂಗಿಕ ದೌರ್ಜನ್ಯಗಳನ್ನು ತಡೆಯಬಹುದು ಎಂದರು. ಪೋಷಕರು ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡುವುದು ಅವರಿಗು ಮತ್ತು ಸಮಾಜಕ್ಕೆ ಅವರಿಂದ ಒಳಿತಾಗಲಿ ಎಂದು. ಕಾಯ್ದೆ ಕಾನೂನುಗಳ ಬಗ್ಗೆ ಅರಿತು ಅಕ್ಕಪಕ್ಕದವರಿಗೆ ತಿಳಿ ಹೇಳುವ ಕಾರ್ಯವಾಗಬೇಕು. ಮಕ್ಕಳು ಕಾನೂನನ್ನು ಅಧ್ಯಯನ ಮಾಡಿ ಪೋಷಕರಿಗೆ ತಿಳಿಸಿದಲ್ಲಿ ಅವರು ಸಂತಷದಿಂದ ಇರುತ್ತಾರೆ ಎಂದು ಸಲಹೆ ನೀಡಿದರು.

ಗೌರವಾನ್ವಿತ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಪ್ರಶಾಂತ್ ನಾಗಲಾಪುರ್ ಅವರು ಪ್ರಾಸ್ತಾವಿಕ ಮಾತನಾಡಿದರು. ಈ ಸಂದರ್ಭದಲ್ಲಿ ವಾಸವಿ ಪ್ರೌಢಶಾಲೆಯ ಮುಖ್ಯಾಧ್ಯಾಪಕರಾದ ಡಾ.ಯತ್ನಳ್ಳಿ ಮಲ್ಲಯ್ಯ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪಿ.ಶ್ರೀನಿವಾಸಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ಚನ್ನಬಸಪ್ಪ., ಆರಕ್ಷಕ ನಿರೀಕ್ಷರಾದ ಜಯಲಕ್ಷ್ಮೀ, ಶಿಶು ಅಭಿವೃದ್ಧಿ ಇಲಾಖೆಯ ಸುಜಾತ, ಕಾನೂನು ಪರಿವೀಕ್ಷಣಾಧಿಕಾರಿಗಳಾದ ಶ್ರೀಕಾಂತ್ ಮತ್ತು ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

error: Content is protected !!