ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶಾಲಾಪೂರ್ವ ಶಿಕ್ಷಣ ಅವಶ್ಯಕ : ಸಿಡಿಪಿಒ ಬೆಟದಪ್ಪ.

ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶಾಲಾಪೂರ್ವ ಶಿಕ್ಷಣ ಅವಶ್ಯಕ : ಸಿಡಿಪಿಒ ಬೆಟದಪ್ಪ.

ಕುಕನೂರು : ಮಕ್ಕಳು ಸರ್ವತೋಮುಖ ಬೆಳವಣಿಗೆ ಹೊಂದಲು ಶಾಲಾ ಪೂರ್ವ ಕಲಿಕಾ ಶಿಕ್ಷಣ ಅತೀ ಮುಖ್ಯ ಎಂದು ಯಲಬುರ್ಗಾ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬೆಟದಪ್ಪ ಮಾಳೇಕೊಪ್ಪ ಹೇಳಿದರು.

ಅವರು ಕುಕನೂರು ಪಟ್ಟಣದ ಗಾಂಧಿನಗರದ ಅಂಗನವಾಡಿ ಕೇಂದ್ರದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ, ಜಿಲ್ಲಾ ಪಂಚಾಯತ್ ಕೊಪ್ಪಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಟಾಟಾ ಟ್ರಸ್ಟ್ ಹಿಸೋ ಅಭಿವೃದ್ಧಿ ಯೋಜನೆ ಇವರ ಸಂಯುಕ್ತ ಸಂಯೋಗದಲ್ಲಿ ಶಾಲಾ ಪೂರ್ವ ಶಿಕ್ಷಣ ಬಲವರ್ಧನೆಯ ಅಂಗನವಾಡಿ ಕಾರ್ಯಕರ್ತೆಯರಿಗೆ ಐದನೇ ಹಂತದ ತರಬೇತಿ ಕಾರ್ಯಕ್ರಮ ಉದ್ಘಾಟನೆ ಮಾಡಿ ಅವರು ಮಾತನಾಡಿದರು.

ಅಂಗನವಾಡಿ ಕಾರ್ಯಕರ್ತೆಯರು ಶಾಲಾಪೂರ್ವ ಶಿಕ್ಷಣದ ತರಬೇತಿ ಪಡೆದುಕೊಂಡು ಮಕ್ಕಳ ಸಾಮಾಜಿಕ, ಬೌದ್ಧಿಕ, ಮಾನಸಿಕ, ಶೈಕ್ಷಣಿಕ ಬೆಳವಣಿಗೆಯು 3 ರಿಂದ 6 ವರ್ಷದ ಮಕ್ಕಳಿಗೆ ಕಾರ್ಯಕರ್ತೆಯರು ಆಟ ಹಾಗೂ ಪಾಠದ ಮೂಲಕ ಮಕ್ಕಳಿಗೆ ಬೋಧನೆ ಮಾಡಬೇಕು ಕಲಿಕೆಗೆ ಬೇಕಾದ ಎಲ್ಲಾ ರೀತಿಯ ಸ್ಥಳೀಯವಾಗಿ ದೊರೆಯುವಂತಹ ಬೋಧನಾ ತಯಾರಿಸಿಕೊಂಡು ಅದರ ಮೂಲಕ ಮಕ್ಕಳಿಗೆ ಕಲಿಕೆಯ ಚಟುವಟಿಕೆ ಮಕ್ಕಳಿಗೆ ಕ್ಯಾಲೆಂಡರ್ ಸಂಖ್ಯೆ, ಎಣಿಕೆ, ಶಬ್ದ ಆಟ, ಗಣಿತ ಪೂರ್ವ ತಯಾರಿ ಓದುವ ತಯಾರಿ ಸಂಗೀತ, ನಾಟ್ಯ, ಕಥೆ, ಭಾಷೆ, ಆಟಗಳು, ಕ್ರಿಯಾತ್ಮಕ ಚಟುವಟಿಕೆಗಳನ್ನು ಮಾಡಿಸುವುದು ಮಕ್ಕಳಿಗೆ ಶಿಸ್ತು, ಸಂಯಮ, ಹೊಂದಾಣಿಕೆ ನಾಯಕತ್ವ ಮನೋಭಾವವನ್ನು ಮಕ್ಕಳಿಗೆ ಈ ಚಟುವಟಿಕೆಗಳನ್ನು ಮೂಡಿಸುವುದರ ಮೂಲಕ ಕಲಿಸಬೇಕು ಎಂದರು.

ನಮ್ಮ ಜಿಲ್ಲೆ ಹಾಗೂ ತಾಲೂಕಿನ ಶಾಲಾಪೂರ್ವ ಮಾದರಿ ಆಗಿದೆ. ಕಳೆದ ಆರು ತಿಂಗಳುಗಳಿಂದ ನಮ್ಮ ತಾಲೂಕಿಗೆ ನಾಲ್ಕು ರಾಜ್ಯದ ತಂಡಗಳು ತಾಲೂಕಿನಲ್ಲಿ ನಡೆಯುತ್ತಿರುವ ಶಾಲಾಪೂರ್ವ ಶಿಕ್ಷಣ ಅಧ್ಯಯನ ಮಾಡಿ ಇಲ್ಲಿಯ ಪೂರ್ವ ಶಿಕ್ಷಣ ನೋಡಿ ಕೊಂಡು ಇಡೀ ದೇಶಕ್ಕೆ ಇಲ್ಲಿಯ ಶಾಲಾ ಪೂರ್ವ ಶಿಕ್ಷಣ ಮಾದರಿ ಆಗಿದೆ ಎಂದು ನಾಲ್ಕು ರಾಜ್ಯಗಳಿಂದ ಅಧ್ಯಯನ ಮಾಡಲು ಬಂದ ತಂಡ ಹೇಳಿದೆ ಇಲ್ಲಿಯ ಶಾಲಾ ಪೂರ್ವ ಶಿಕ್ಷಣ ನೋಡಿ ನಮ್ಮ ರಾಜ್ಯದಲ್ಲಿ ಅನುಷ್ಠಾನಗೊಳಿಸುವುದಕ್ಕೆ ನಮ್ಮ ರಾಜ್ಯಕ್ಕೆ ವರದಿ ಕೊಡುತ್ತೇವೆ ಎಂದು ಹೇಳಿದ್ದಾರೆ ನಮ್ಮ ಜಿಲ್ಲೆಯಲ್ಲಿ ಮಕ್ಕಳಿಗೆ ನೀಡುವ ಪೂರಕ ಪೌಷ್ಠಿಕ ಆಹಾರ ಗುಣಮಟ್ಟದಿಂದ ಕೂಡಿದ್ದು ಮಕ್ಕಳ ಅಪೌಷ್ಟಿಕತೆ ನೀಗಿಸಲು ಜಿಲ್ಲಾ ಆಡಳಿತ ಬಹಳ ಕಾಳಜಿ ತೆಗೆದುಕೊಂಡಿದೆ ಅದರಂತೆ ನಾವು ಕೂಡ ಕೆಲಸ ಮಾಡಿ ಮಕ್ಕಳಲ್ಲಿ ಅಪೌಷ್ಟಿಕತೆ ಹೋಗಲಾಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಸಿಡಿಪಿಒ ಬೆಟದಪ್ಪ ಮಾಳೇಕೊಪ್ಪ ಹೇಳಿದರು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಹಿರಿಯ ಮೇಲ್ವಿಚಾರಕಿ.ಮಂಜುಳಾ, ಶೋಭಾ ಹಾಗೂ ಪದ್ಮಾವತಿ ಅಂಗನವಾಡಿ ಕಾರ್ಯಕರ್ತರು ತರಬೇತಿಯಲ್ಲಿ ಭಾಗವಹಿಸಿದ್ದರು.

Leave a Reply

error: Content is protected !!