ಕುಕನೂರು : 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಕುಕನೂರು ತಹಸೀಲ್ದಾರ್ ಕಚೇರಿ ಆವರಣದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.
ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪಟ್ಟಣ ಪಂಚಾಯತ್ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ 78 ನೇ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿ ಹಾಗೂ ತಹಸೀಲ್ದಾರ್ ಎಚ್ ಪ್ರಾಣೇಶ್ ಅವರು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿ ಅವರು, ಬ್ರಿಟಿಷ್ ವಷಾಹತು ಶಾಹಿಗಳಿಂದ ಮುಕ್ತಿ ಹೊಂದಲು ಅನೇಕ ಮಹನೀಯರ ತ್ಯಾಗ, ಬಲಿದಾನಗಳಿಂದ 1947 ರಲ್ಲಿ ಸ್ವಾತಂತ್ರ್ಯ ಪಡೆಯಲಾಯಿತು ಎಂದು ಹೇಳಿದರು.
ತಾಲೂಕು ಪಂಚಾಯತ್ ಯೋಜನಾಧಿಕಾರಿ ಆನಂದ್ ಅವರು ಮಾತನಾಡಿ, ದೇಶದ ಅನೇಕ ವೀರ ಸೇನಾನಿಗಳ ಪರಾಕ್ರಮದಿಂದ ಸ್ವಾತಂತ್ರ್ಯ ಪಡೆಯಲಾಗಿದೆ. ಡಾ. ಬಿ ಆರ್ ಅಂಬೇಡ್ಕರ್ ಅವರ ಸುಸ್ಥಿರ ಸಂವಿಧಾನದಿಂದಾಗಿ ಇಂದು ಭಾರತ ದೇಶವು ಸದೃಢವಾಗಿ ಬೆಳೆದಿದೆ. ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ ಎಂದು ಹೇಳಿದರು.
ವಿದ್ಯಾನಂದ ಗುರುಕುಲ ಶಾಲೆಯ ಪ್ರಧ್ಯಾಪಕ ಶ್ರೀಕಾಂತ್ ಕುಲಕರ್ಣಿ ಅವರಿಂದ ಸ್ವಾತಂತ್ರ್ಯ ಹೋರಾಟದ ಕುರಿತು ವಿಶೇಷ ಉಪನ್ಯಾಸ ನಡೆಯಿತು. ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ರವಿತೇಜ್ ಅಬ್ಬಿಗೇರಿ ಕೂಡಾ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.
ಗ್ರಾಮ ಆಡಳಿತ ಅಧಿಕಾರಿ ರಾಣಿ ಹಳ್ಳಿ, ಶಿಕ್ಷಕ ಫೀರ್ ಸಾಬ್ ದಫೆದಾರ್ ಕಾರ್ಯಕ್ರಮ ನಿರೂಪಣೆ ಮಾಡಿದರು. ವಿವಿಧ ಶಾಲೆಯ ಮಕ್ಕಳಿಂದ ಸ್ವಾತಂತ್ರ್ಯ ಹಬ್ಬದ ಸಾಂಸ್ಕೃತಿಕ ನೃತ್ಯಗಳು ನಡೆದವು.
ಈ ಸಂದರ್ಭದಲ್ಲಿ ಗ್ರೇಡ್ 2 ತಹಸೀಲ್ದಾರ್ ಮುರಳೀಧರ ಕುಲಕರ್ಣಿ, ಪಟ್ಟಣ ಪಂಚಾಯತ್ ಮುಖ್ಯಧಿಕಾರಿ ರವೀಂದ್ರ ಬಾಗಲಕೋಟ, ಶಿಕ್ಷಕ ಶರಣಪ್ಪ ರಾವಣಕಿ, ಪಟ್ಟಣ ಪಂಚಾಯತ್ ಸದಸ್ಯ ನೂರುದ್ದಿನ್ ಸಾಬ್ ಗುಡಿಹಿಂದಲ್, ಮುಖಂಡ ರಸಿದ್ ಸಾಬ್ ಹಣಜಗಿ, ಸೇರಿದಂತೆ ಕಂದಾಯ ಇಲಾಖೆಯ ಸಿಬ್ಬಂದಿಗಳು, ಪೊಲೀಸ್ ಸಿಬ್ಬಂದಿಗಳು, ವಿದ್ಯಾರ್ಥಿಗಳು ಇತರರು ಉಪಸ್ಥಿತರಿದ್ದರು.