ಗದಗ : ಜಿಲ್ಲಾ ಆಡಳಿತ ಭವನದ ವಿಡಿಯೋ ಕಾನ್ಫರೆನ್ಸ್ ಹಾಲಿನಲ್ಲಿ ಶುಕ್ರವಾರ ಅಧಿಕಾರಿಗಳ ಸಭೆ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು.
ಶಿರಹಟ್ಟಿ ಹಾಗೂ ಲಕ್ಷ್ಮೇಶ್ವರ ಪಹಣಿಗೆ ಆಧಾರ್ ಜೋಡಣೆಯಲ್ಲಿ ಅತಿ ಹೆಚ್ಚು ಪ್ರಗತಿ ಸಾಧಿಸಿದ ಶಿರಹಟ್ಟಿ ಹಾಗೂ ಲಕ್ಷ್ಮೇಶ್ವರ ತಾಲೂಕಿನ ತಾಲೂಕ್ ದಂಡಾಧಿಕಾರಿ ಅನಿಲ ಬಡಿಗೇರ್ ಅವರು ತಾಲೂಕಿನ 82.11 % ರೆಸ್ಟು ಮತ್ತು ಲಕ್ಷ್ಮೇಶ್ವರ ತಾಲೂಕಿನ ದಂಡಾಧಿಕಾರಿ ವಾಸುದೇವ ಸ್ವಾಮಿ ಅವರು ತಾಲೂಕಿನ 80.19 % ರಷ್ಟು ಪ್ರಗತಿ ಸಾಧಿಸಿದ್ದು ಹಾಗೂ 80% ರಸ್ಟು ಸಾಧಿಸಿದ ಒಟ್ಟು 4 ಕಂದಾಯ ನಿರೀಕ್ಷಕರಿಗೆ ಹಾಗೂ 90% ಕಿಂತ ಹೆಚ್ಚು ಪ್ರಗತಿ ಸಾಧಿಸಿದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಪ್ರಸಂಶನ ಪತ್ರ ನೀಡಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಮುದಕಮನವರ್ ತಹಶೀಲ್ದಾರರು ಕಂದಾಯ ನಿರೀಕ್ಷಕರು ಕಂದಾಯ ಇಲಾಖೆ ಸಿಬ್ಬಂದಿ ವರ್ಗದವರು ಹಾಜರಾಗಿದ್ದರು.