ರಾಜ್ಯಪಾಲರ ಕ್ರಮ ಖಂಡಿಸಿ ಕುಕನೂರು ಬಂದ್.?? :ಕುರುಬ ಸಂಘ, ಕೆಪಿಸಿಸಿ, ಹಿಂದುಳಿದ ವರ್ಗಗಳ ಸಂಘಟನೆಗಳ ತಯಾರಿ. ??
PV ನ್ಯೂಸ್ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಿಚಾರಣೆಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮವನ್ನು ರಾಜ್ಯ ಪ್ರದೇಶ ಕಾಂಗ್ರೆಸ್ ಪಕ್ಷ , ರಾಜ್ಯ ಕುರುಬರ ಸಂಘ, ಹಿಂದುಳಿದ ವರ್ಗಗಳ ಜಾಗೃತಿ ಸಂಘಟನೆಗಳು ತೀವ್ರವಾಗಿ ಖಂಡಿಸಿವೆ.
ಅಕ್ರಮವಾಗಿ 14 ಸೈಟ್ ಗಳನ್ನು ಪಡೆದ ಆರೋಪ ಹಿನ್ನೆಲೆ ಖಾಸಗಿ ದೂರುಗಳನ್ನು ಅಧರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನ್ಯಾಯಾಂಗ ವಿಚಾರಣೆಗೆ (ಪ್ರಾಸಿಕ್ಯೂಷನ್) ಅನುಮತಿ ಕೊಟ್ಟ ರಾಜ್ಯಪಾಲರ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಪಕ್ಷ ರಾಜ್ಯಾದ್ಯಂತ ಹೋರಾಟಕ್ಕೆ ಕರೆ ಕೊಟ್ಟಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅನುಮತಿ ಕೊಟ್ಟಿರುವ ರಾಜ್ಯಪಾಲರ ಕ್ರಮ ಸಂವಿಧಾನ ವಿರೋಧಿ, ರಾಜಕೀಯ ಪ್ರೇರಿತ, ಭ್ರಷ್ಟಾಚಾರದ ಯಾವುದೇ ಕಪ್ಪು ಚುಕ್ಕೆಯಿಲ್ಲದ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಪಕ್ಷ ರಾಜ್ಯಪಾಲರ ಮೂಲಕ ಸಂಚು ರೂಪಿಸಿದೆ, ರಾಜ್ಯಪಾಲರ ಕ್ರಮವನ್ನು ವಿರೋಧಿಸಿ ರಾಜ್ಯದ್ಯಂತ ಕೆ ಪಿ ಸಿ ಸಿ ಪ್ರತಿಭಟನೆ ಮಾಡಲು ಕರೆ ಕೊಟ್ಟಿದೆ.
ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರು ನಲ್ಲಿ ರಾಜ್ಯಪಾಲ ಥಾವರ್ ಚಂದ್ ಗೇಹಲೊಟ್ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು. ರಾಜ್ಯಪಾಲರ ನಡೆ ಖಂಡಿಸಿ ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಮೈಸೂರಿನಲ್ಲಿ ಪ್ರತಿಭಟನೆ ನಡೆಸುತ್ತಿದೆ.ಮತ್ತೊಂದುಡೆ ರಾಜ್ಯ ಕುರುಬರ ಸಂಘ ಬೆಂಗಳೂರಲ್ಲಿ ಪ್ರತಿಭಟನೆ ಮಾಡುತ್ತಿದೆ.
ಕೆಪಿಸಿಸಿ, ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ, ಮತ್ತು ರಾಜ್ಯ ಕುರುಬರ ಸಂಘ ಸೇರಿದಂತೆ ಇನ್ನುಳಿದ ಅಹಿಂದ ಸಂಘಟನೆಗಳು ರಾಜ್ಯಪಾಲರ ಕ್ರಮ ಖಂಡಿಸಿ ರಾಜ್ಯಾದ್ಯಂತ ಹೋರಾಟಕ್ಕೆ ಮುಂದಾಗಿವೆ ಎನ್ನಲಾಗಿದೆ.
ಸೋಮವಾರ ಅಥವಾ ಮಂಗಳವಾರ ಕುಕನೂರು ಪಟ್ಟಣದಲ್ಲಿ ಬ್ರಹತ್ ಪ್ರತಿಭಟನೆಗೆ ಚಿಂತನೆ.?
ಕಾಂಗ್ರೆಸ್ ಪಕ್ಷ, ಹಿಂದುಳಿದ ವರ್ಗಗಳ ಒಕ್ಕೂಟ ಮತ್ತು ರಾಜ್ಯ ಕುರುಬ ಸಂಘ ಸೇರಿದಂತೆ ಇತರ ಸಂಘಟನೆಗಳು ಕುಕನೂರು, ಯಲಬುರ್ಗಾ ಪಟ್ಟಣದಲ್ಲಿ ಬ್ರಹತ್ ಪ್ರತಿಭಟನೆ ನಡೆಸಲು ಚಿಂತನೆ ನಡೆದಿದೆ ಎನ್ನಲಾಗುತ್ತಿದೆ.
ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಮುಖಂಡ ಹಾಗೂ ಕುಕನೂರು ತಾಲೂಕು ಹಾಲುಮತ ಸಂಘದ ಅಧ್ಯಕ್ಷ ಮಂಜುನಾಥ್ ಕಡೇಮನಿ, ಹಾಲುಮತ ಸಮಾಜದ ಧೀಮಂತ ನಾಯಕ ಸಿದ್ದರಾಮಯ್ಯ ಅವರು ಜನಪ್ರಿಯ ಮುಖ್ಯಮಂತ್ರಿಯಾಗಿದ್ದಾರೆ. ರಾಜ್ಯಪಾಲರ ರಾಜಕೀಯ ಪ್ರೇರಿತ ನಡೆಯನ್ನು ಖಂಡಿಸುತ್ತೇವೆ. ಈ ಕುರಿತಂತೆ ಕುಕನೂರು ತಾಲೂಕಿನಲ್ಲಿ ಪ್ರತಿಭಟನೆ ನಡೆಸಲು ಶಾಸಕ ಬಸವರಾಜ್ ರಾಯರಡ್ಡಿ ಮತ್ತು ಸ್ಥಳೀಯ ಇತರ ಮುಖಂಡರೊಂದಿಗೆ ಚರ್ಚಿಸಿ ಹೋರಾಟದ ರೂಪುರೇಷಗಳ ಬಗ್ಗೆ ನಿರ್ಧರಿಸುತ್ತೇವೆ ಎಂದು ಮಂಜುನಾಥ್ ಕಡೇಮನಿ ಹೇಳಿದ್ದಾರೆ.
ನಾಳೆ ಇಲ್ಲವೇ ನಾಡಿದ್ದು ಕುಕನೂರು ಪಟ್ಟಣದಲ್ಲಿ ಬ್ರಹತ್ ಪ್ರತಿಭಟನೆ ನಡೆಸಲು ವೇದಿಕೆ ಸಜ್ಜಾಗುತ್ತಿದೆ ಎನ್ನಲಾಗಿದೆ.