ವಿಜಯನಗರ ಜಿಲ್ಲೆಯಲ್ಲಿ 58 ಅಂಗನವಾಡಿ ಕಾರ್ಯಕರ್ತೆಯರು, 239 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ!
ಹೊಸಪೇಟೆ (ವಿಜಯನಗರ) : ವಿಜಯನಗರ ಜಿಲ್ಲೆಯ 5 ತಾಲೂಕಿನ ಶಿಶು ಅಭಿವೃದ್ದಿ ಯೋಜನೆಯ ವ್ಯಾಪ್ತಿಯ ಪುರಸಭೆ, ಪಟ್ಟಣ ಪಂಚಾಯತಿ, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಗೌರವ ಸೇವೆಯ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹೂವಿನಹಡಗಲಿ ತಾಲೂಕಿನಲ್ಲಿ 12 ಅಂಗನವಾಡಿ ಕಾರ್ಯಕರ್ತೆ ಹಾಗೂ 44 ಅಂಗನವಾಡಿ ಸಹಾಯಕಿಯರು, ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ 06 ಅಂಗನವಾಡಿ ಕಾರ್ಯಕರ್ತೆ ಹಾಗೂ 26 ಅಂಗನವಾಡಿ ಸಹಾಯಕಿಯರು, ಹೊಸಪೇಟೆ ತಾಲೂಕಿನಲ್ಲಿ 08 ಅಂಗನವಾಡಿ ಕಾರ್ಯಕರ್ತೆ ಹಾಗೂ 45 ಅಂಗನವಾಡಿ ಸಹಾಯಕಿಯರು, ಕೂಡ್ಲಿಗಿ ತಾಲೂಕಿನಲ್ಲಿ 11 ಅಂಗನವಾಡಿ ಕಾರ್ಯಕರ್ತೆ ಹಾಗೂ 42 ಅಂಗನವಾಡಿ ಸಹಾಯಕಿಯರು, ಹರಪನಹಳ್ಳಿ ತಾಲೂಕಿನಲ್ಲಿ 18 ಅಂಗನವಾಡಿ ಕಾರ್ಯಕರ್ತೆ ಹಾಗೂ 64 ಅಂಗನವಾಡಿ ಸಹಾಯಕಿಯರು ಮತ್ತು ಕೊಟ್ಟೂರು ತಾಲೂಕಿನಲ್ಲಿ 03 ಅಂಗನವಾಡಿ ಕಾರ್ಯಕರ್ತೆ ಹಾಗೂ 18 ಅಂಗನವಾಡಿ ಸಹಾಯಕಿಯರು ಸೇರಿದಂತೆ ಒಟ್ಟು 58 ಅಂಗನವಾಡಿ ಕಾರ್ಯಕರ್ತೆ ಹಾಗೂ 239 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 12 ಕೊನೆಯ ದಿನವಾಗಿದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ವೆಬ್‌ಸೈಟ್ https://karnemakaone.kar.nic.in/abcd ಮತ್ತು ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ವಿಜಯನಗರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.