ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಬಸ್ ಡಿಕ್ಕಿ, ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವು..!!
ನರಗುಂದ : ಶ್ರಾವಣ ಮಾಸದ ನಿಮಿತ್ತ ಹಾವೇರಿ ಜಿಲ್ಲೆಯಿಂದ ನರಗುಂದ ತಾಲೂಕಿನ ಕಲ್ಲಾಪೂರ ಗ್ರಾಮದ ಬಸವೇಶ್ವರ ದೇವಸ್ಥಾನಕ್ಕೆ ಹೊರಟಿದ್ದ ಕಾರಿಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕೊಣ್ಣೂರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ಜರುಗಿದೆ.
ಮೃತರನ್ನು ಹಾವೇರಿ ಮೂಲದ ರುದ್ರಪ್ಪ ಅಂಗಡಿ (55) ಪತ್ನಿ ರಾಜೇಶ್ವರಿ(45) ಪುತ್ರಿ ಐಶ್ವರ್ಯ (16) ಪುತ್ರ ವಿಜಯ(12) ಎಂದು ಗುರುತಿಸಲಾಗಿದೆ.
ಇಳಕಲ್ ನಿಂದ ಹುಬ್ಬಳ್ಳಿ ಕಡೆ ಸಾರಿಗೆ ಬಸ್ ಹೊರಟಿತ್ತು ಎನ್ನಲಾಗಿದೆ.
ಶ್ರಾವಣ ಮಾಸದ ಹಿನ್ನೆಲೆಯಲ್ಲಿ ಇಂದು ನರಗುಂದ ತಾಲೂಕಿನ ಕಲ್ಲಾಪೂರ ಬಸವೇಶ್ವರ ದೇವಸ್ಥಾನಕ್ಕೆ ದರ್ಶನ ಪಡೆಯಲು ಆಗಮಿಸುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದ ಶವ ತೆಗೆಯಲು ಪೊಲೀಸರು ಹರಸಾಹಸ ಪಟ್ಟರು. ನರಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.