ಹೊಸಪೇಟೆ (ವಿಜಯನಗರ) : ಹೂವಿನಹಡಗಲಿಯ ಸರಕಾರಿ ಕೈಗಾರಿಕ ತರಬೇತಿ ಸಂಸ್ಥೆಯಲ್ಲಿ ಆಗಸ್ಟ್ 21ರಂದು ಬೆಳಗ್ಗೆ 9 ಗಂಟೆಯಿಂದ ಜಿಲ್ಲಾ ಅಪ್ರೆಂಟಿಸ್‌ಶಿಪ್ ಮೇಳ ಆಯೋಜಿಸಲಾಗಿದೆ.
ಜಿಲ್ಲೆಯ ಎಲ್ಲಾ ಉದ್ದಿಮೆದಾರರು ಮತ್ತು ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಪ್ರಾಚಾರ್ಯರು ತಮ್ಮ ಸಿಬ್ಬಂದಿಗಳೊಂದಿಗೆ ಭಾಗವಹಿಸಬೇಕು ಹಾಗೂ ಶಿಶಿಕ್ಷರು ತರಬೇತಿ ನೊಂದಣಿಗಾಗಿ ಐ.ಟಿ.ಐ ಪಾಸಾದ ಆಸಕ್ತ ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳೊಂದಿಗೆ ಹಾಜರಾಗಬೇಕು ಎಂದು ಹೂವಿನಹಡಗಲಿಯ ಸರಕಾರಿ ಕೈಗಾರಿಕ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-: ಅರ್ಜಿ ಆಹ್ವಾನ :-
ಹೊಸಪೇಟೆ (ವಿಜಯನಗರ) : 2024-25ನೇ ಸಾಲಿನಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮೀನುಗಾರಿಗೆ ಇಲಾಖೆಯ ಜಲಸಂಪನ್ಮೂಲಗಳಾದ ಸುಂಕಲತಾಯಮ್ಮ್ಮ ಕೆರೆಯ ಮೀನು ಪಾಶುವಾರು ಹಕ್ಕನ್ನು 5 ವರ್ಷಕ್ಕೆ ನೇರಗುತ್ತಿಗೆ ಮೂಲಕ ವಿಲೇವಾರಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು ಆಗಸ್ಟ್ 23 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ.
ಅರ್ಹ ಮೀನುಗಾರರ ಸಹಕಾರ ಸಂಘ ಹಾಗೂ ಮೀನು ರೈತ ಉತ್ಪಾದಕರ ಸಂಸ್ಥೆಗಳಿಂದ (ಎಫ್‌ಪಿಒ) ಅರ್ಜಿ ಆಹ್ವಾನಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಸಂಪರ್ಕಿಸಿ ಎಂದು ಪ್ರಕಟಣೆ ತಿಳಿಸಿದೆ.
ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಸಾಲ ಸೌಭ್ಯಕ್ಕೆ ಅರ್ಜಿ ಆಹ್ವಾನ
ಹೊಸಪೇಟೆ (ವಿಜಯನಗರ) : 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಅರಿವು (ರಿನ್ಯೂವಲ್) ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಮತಿಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಭೌದ್ದರು, ಸಿಖ್ಖರು, ಪಾರ್ಸಿ ಜನಾಂಗದ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಅ.31 ಕೊನೆಯ ದಿನಾಂಕ ಆಗಿರುತ್ತದೆ.
ಈ ಹಿಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ, ನೀಟ್, ಡಿ-ಸಿಇಟಿ, ಪಿಜಿ-ಸಿಇಟಿ ನಲ್ಲಿ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್ಗಳಲ್ಲಿ ಆಯ್ಕೆಯಾಗಿರುವಂತಹ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯ ನೀಡಲಾಗುವುದು. ಸಾಲ ಪಡೆಯಲು ಅಪೇಕ್ಷಿಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಾಗ ನಿಗಮದಿಂದ ಈ ಹಿಂದಿನ ವರ್ಷದಲ್ಲಿ ಪಡೆದಿರುವ ಒಟ್ಟು ಸಾಲದ ಬಾಕಿಯ ಮೊತ್ತದ ಶೇ12% ರಷ್ಟು ಮೊತ್ತವನ್ನು ಆನ್‌ಲೈನ್ ಮುಖಾಂತರ ಅಥವಾ ಜಿಲ್ಲಾ ಕಚೇರಿಯಲ್ಲಿ ಪಾವತಿಸಬೇಕು.
ಈ ಹಿಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗಿದ್ದ ಬೇರೆ ಬೇರೆ ವರ್ಷಗಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಅರಿವು ವಿದ್ಯಾಭ್ಯಾಸ ಸಾಲ ಪಡೆಯದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು, ರಿನ್ಯೂವಲ್ ಮೊತ್ತವನ್ನು ಪಾವತಿಸುವುದು ಆಗತ್ಯಾವಿರುವುದಿಲ್ಲ. ವಿದ್ಯಾರ್ಥಿಗಳು https:/kmdconline.karnataka.gov.in/ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಹೊಸಪೇಟೆಯ ತಾಲೂಕು ಕಚೇರಿ ಆವರಣದಲ್ಲಿರುವ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ), ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಭೇಟಿ ನೀಡಿ ಎಂದು ಪ್ರಕಟಣೆ ತಿಳಿಸಿದೆ.