LOCAL NEWS : ರಾಜ್ಯಪಾಲರ ಅವಹೇಳನ ಖಂಡಿಸಿ ಕೊಪ್ಪಳದಲ್ಲಿ ಬಿಜೆಪಿ ಬ್ರಹತ್ ಪ್ರತಿಭಟನೆ!!

You are currently viewing LOCAL NEWS : ರಾಜ್ಯಪಾಲರ ಅವಹೇಳನ ಖಂಡಿಸಿ ಕೊಪ್ಪಳದಲ್ಲಿ ಬಿಜೆಪಿ ಬ್ರಹತ್ ಪ್ರತಿಭಟನೆ!!

ರಾಜ್ಯಪಾಲರ ಅವಹೇಳನ ಖಂಡಿಸಿ ಕೊಪ್ಪಳದಲ್ಲಿ ಬೃಹತ್ ಪ್ರತಿಭಟನೆ

PV ನ್ಯೂಸ್ ಡೆಸ್ಕ್-ಕೊಪ್ಪಳ :  ಸಿ.ಎಂ ಸಿದ್ದರಾಮಯ್ಯ ಅವರ ವಿರುದ್ಧ ಭ್ರಷ್ಟಾಚಾರ ಆರೋಪ ಹಿನ್ನಲೆಯಲ್ಲಿ ಪ್ರಾಸಿಕ್ಯೂಸೆನ್ ಗೆ ಅನುಮತಿ ನೀಡಿದ ಹಿನ್ನೆಲೆ ರಾಜ್ಯ ಕಾಂಗ್ರೆಸ್ ನಾಯಕರು ಬಾಯಿಗೆ ಬಂದಂತೆ ಮಾತಾಡಿ ರಾಜ್ಯಪಾಲರ ಅವಹೇಳನ ಮಾಡಿದ್ದನ್ನು ಖಂಡಿಸಿ ಕೊಪ್ಪಳ ನಗರದಲ್ಲಿ ಬಿಜೆಪಿ ಪಕ್ಷ ಬ್ರಹತ್ ಪ್ರತಿಭಟನೆ ನಡೆಸಿತು.

ಅಶೋಕ್ ವೃತ್ತದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ನವೀನ್ ಕುಮಾರ್ ಗುಳಗಣ್ಣನವರ್ ನೇತೃತ್ವದಲ್ಲಿ ಬಿಜೆಪಿ ಪಕ್ಷವು ರಾಜ್ಯ ಕಾಂಗ್ರೆಸ್ ಸರ್ಕಾರ, ಕಾಂಗ್ರೆಸ್ ನಾಯಕರ ವಿರುದ್ಧ ದಿಕ್ಕಾರ ಕೂಗಿ ತಮ್ಮ ಸಿಟ್ಟು ಹೊರಹಾಕಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ಹಾಲಪ್ಪ ಆಚಾರ್, ರಾಜ್ಯಪಾಲರು ಕಾನೂನು ಪ್ರಕಾರ, ಸಂವಿಧಾನದ ಪ್ರಕಾರವೇ ತಮ್ಮ ಕರ್ತವ್ಯ ನಿರ್ವಹಿಸಿದ್ದಾರೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಭಾವ ಬೀರಿ 14 ಸೈಟು ಗಳನ್ನು ಅಕ್ರಮವಾಗಿ ಪಡೆದಿದ್ದು ದಾಖಲೆಗಳ ಮೂಲಕ ಬಹಿರಂಗವಾಗಿದೆ. ಹೆಚ್ಚಿನ ತನಿಖೆ ಗಾಗಿ ರಾಜ್ಯಪಾಲರು ಅನುಮತಿ ಕೊಟ್ಟಿದ್ದು ಕಾಂಗ್ರೆಸ್ ನಾಯಕರನ್ನು ಕಣ್ಗೆಡಿಸಿದೆ. ದಲಿತ ಸಮುದಾಯಕ್ಕೆ ಸೇರಿದ ರಾಜ್ಯಪಾಲರನ್ನು ಕಾಂಗ್ರೆಸ್ ನಾಯಕರು ಟಿಕೀಸುವ ಬರದಲ್ಲಿ ಅವಹೇಳನ ಮಾಡಿ ರಾಜ್ಯಪಾಲರ ಗೌರವಕ್ಕೆ ಚ್ಯುತಿ ತರುತ್ತಿದ್ದಾರೆ. ಖಂಡಿತವಾಗಿಯೂ ಕಾಂಗ್ರೆಸ್ ನಾಯಕರು ಇದು ಶೋಭೆಯಲ್ಲ. ನೈತಿಕತೆ ಇದ್ದರೆ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಲಿ ಎಂದು ಹಾಲಪ್ಪ ಆಚಾರ್ ಹೇಳಿದರು.

ಈ ಸಂದರ್ಭದಲ್ಲಿ ಎಂ ಎಲ್ ಸಿ ಹೇಮಲತಾ ನಾಯಕ್, ವಿಧಾನಸಭೆಯ ವಿರೋಧ ಪಕ್ಷದ ಸಚೇತಕ ದೊಡ್ಡನಗೌಡ ಪಾಟೀಲ್, ಮಾಜಿ ಸಂಸದ ಶಿವರಾಮೇ ಗೌಡ, ಬಸವರಾಜ್ ಕ್ಯಾವಿಟರ್, ಜಿಲ್ಲಾ ಮತ್ತು ತಾಲೂಕು ಬಿಜೆಪಿ ಅಧ್ಯಕ್ಷರು, ಪದಾಧಿಕಾರಿಗಳು, ಮೋರ್ಚಾ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

error: Content is protected !!