ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಕೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಖಂಡಿಸಿ ರಾಷ್ಟ್ರಪತಿಗೆ ಮನವಿ!
PV ನ್ಯೂಸ್ ಡೆಸ್ಕ್- ಶಿರಹಟ್ಟಿ : ಗುಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರ ವಿರುದ್ಧ ಪ್ರಶುಕೇಶನ್ ಗೆ ಅನುಮತಿ ನೀಡಿದ ರಾಜ್ಯಪಾಲರ ನಡೆಯನ್ನು ಕಂಡಿಸಿ ಶಿರಹಟ್ಟಿ ತಾಲೂಕು ಕಾಂಗ್ರೆಸ್ ಕಮಿಟಿ ವತಿಯಿಂದ ಪಟ್ಟಣದ ಆಂಜನೇಯ ದೇವಸ್ಥಾನದಿಂದ ಮೆರವಣಿಗೆ ಪ್ರಾರಂಭಿಸಿ ಪಟ್ಟಣದ ಪ್ರಮುಖ ಬೀದಿಗಳಾದ ನೆಹರು ಸರ್ಕಲ್ ನಲ್ಲಿ ಟಾಯರಿಗೆ ಬೆಂಕಿ ಹಚ್ಚಿ ಬ್ರಹತ್ ಪ್ರತಿಭಟನೆ ನಡೆಸಿ ತಾಲೂಕ್ ದಂಡಾಧಿಕಾರಿಗಳಾದ ಅನಿಲ್ ಬಡಿಗೇರ್ ಅವರ ಮುಖಾಂತರ ರಾಷ್ಟ್ರಪತಿ ಯವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನೀ,ಮಾಜಿ ಶಾಸಕ ಜಿಎಸ್ ಗಡ್ಡದೇವರ ಮಠ ರಾಮಣ್ಣ ಲಮಾಣಿ,ಡಿ ಕೆ ಹೋನ್ನಪ್ಪನವರ್,ಕೆ ಪೀ ಸಿ ಸಿ ಪ್ರಧಾನ ಕಾರ್ಯದರ್ಶಿ ಸುಜಾತ ದೊಡ್ಡಮನಿ ಮಾತನಾಡಿ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ನವರ ವಿರುದ್ಧ ಮಾನ್ಯ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ.
ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅನುಮತಿ ನೀಡಿರುವುದು ಅಸಂವಿಧಾನಿಕ ಮತ್ತು ಇದು ಬಿಜೆಪಿಯ ಷಡ್ಯಂತ್ರದ ಒಂದು ಭಾಗ, ರಾಷ್ಟ್ರ ಪತಿಗಳು ಮಧ್ಯಪ್ರವೇಶಿಸಿ ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್ ಗೆ ಅವಕಾಶ ನೀಡಿರುವ ಆದೇಶವನ್ನು ಹಿಂಪಡೆದು ರಾಜೀನಾಮೆ ನೀಡಬೇಕು
ಇದರಲ್ಲಿ ಕೇಂದ್ರ ಸರ್ಕಾರದ ಕೈವಾಡ ಇದೆ. ರಾಜ್ಯಪಾಲರ ಈ ನಡೆಗೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಲಿದ್ದು, ಕಾನೂನಾತ್ಮಕ ಹೋರಾಟ ನಡೆಸಲಿದೆ ಎಂದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಜಿ ಎಸ್ ಗಡ್ಡದೇವರ್ ಮಠ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ವಾಸಣ್ಣ ಕುರುಡುಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹುಮಾಯುನ್ ಮಾಗಡಿ, ದೇವಕ್ಕ ಗುಡಿಮನಿ, ಡಿ ಕೆ ಹೊನ್ನಪ್ಪನವರ್, ಚಾಂದಸಾಬ್ ಮುಳಗುಂದ, ನೂತನ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ,ನೀಲವ್ವ ಹುಬ್ಬಳ್ಳಿ , ದೇವಪ್ಪ ಲಮಾಣಿ,ಪರಮೇಶ್ ಪರಬ್, ಗುರುನಾಥ್ ದಾನಪ್ಪನವರ್, ಮುತ್ತು ಭಾವಿಮನಿ, ಮಹಾಂತೇಶ್ ದಶಮನೀ, ಆನಂದ್ ಕೋಳಿ, ಇನ್ನೂ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರೂ .