ಬೆಂಗಳೂರು : ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರಿಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ನೀಡಿದ ಕುರಿತು ಪ್ರತ್ಯಕ ಮೂರು ಎಫ್ಐಆರ್ ದಾಖಲಾಗಿದೆ ಎಂದು ತಿಳಿದು ಬಂದಿದೆ. ಈ ಪ್ರಕರಣದಲ್ಲಿ ಎರಡು ಎಫ್ಐಆರ್ ನಲ್ಲಿ ಇದೀಗ ಆರೋಪಿ ದರ್ಶನ್ ಎ.1 ಆಗಿ ದಾಖಲಿಸಲಾಗಿದೆ.
ಕೇಂದ್ರ ಕಾರಾಗೃಹದಲ್ಲಿ ನಟ ದರ್ಶನ್ ಗೆ ರಾಜಾತಿಥ್ಯದ ಪೋಟೋ ವೈರಲ್ ಆದ ಬೆನ್ನಲ್ಲೇ, 7 ಮಂದಿ ಜೈಲು ಅಧಿಕಾರಿಗಳನ್ನು ಅಮಾನತು ಗೊಳಿಸಿಸ ಆದೇಶಿಸಿಲಾಗಿತ್ತು. ಅದು ಅಲ್ಲದೇ ಪ್ರಕರಣ ಸಂಬಂಧ ಕೇಂದ್ರ ಕಾರಾಗೃಹದ ಉಪ ನಿರ್ದೇಶಕ ಸೋಮಶೇಖರ್ ನೀಡಿದಂತ ದೂರು ಆಧರಿಸಿ, ಮೂರು ಎಫ್ಐಆರ್ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.