JOB NEWS : ಎನಿ ವೇರ್ ನೋಂದಣಿ ವ್ಯವಸ್ಥೆ ವಿಜಯನಗರ ಜಿಲ್ಲೆಗೂ ವಿಸ್ತರಣೆ : ಸರ್ಕಾರಿ ವಕೀಲರ ಹುದ್ದೆಗೆ ನೇಮಕಾತಿ ಅಧಿಸೂಚನೆ!

You are currently viewing JOB NEWS : ಎನಿ ವೇರ್ ನೋಂದಣಿ ವ್ಯವಸ್ಥೆ ವಿಜಯನಗರ ಜಿಲ್ಲೆಗೂ ವಿಸ್ತರಣೆ : ಸರ್ಕಾರಿ ವಕೀಲರ ಹುದ್ದೆಗೆ ನೇಮಕಾತಿ ಅಧಿಸೂಚನೆ!
ಎನಿ ವೇರ್ ನೋಂದಣಿ ವ್ಯವಸ್ಥೆ ವಿಜಯನಗರ ಜಿಲ್ಲೆಗೂ ವಿಸ್ತರಣೆ
ಹೊಸಪೇಟೆ (ವಿಜಯನಗರ) : 2024-25ಸಾಲಿನ ಆಯವ್ಯಯ ಭಾಷಣದಲ್ಲಿ ಎನಿ ವೇರ್  (any where)  ನೋಂದಣಿ ವ್ಯವಸ್ಥೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗುವುದೆಂದು ಸರ್ಕಾರದಿಂದ ಘೋಷಿಸಲಾಗಿದೆ. ಈ ವ್ಯವಸ್ಥೆಯನ್ನು ಬೆಂಗಳೂರು ನಗರ ಜಿಲ್ಲೆಯಲ್ಲಿ 2011ರಲ್ಲಿ, ತುಮಕೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮಾರ್ಚ್ 2024ರಲ್ಲಿ ನೋಂದಣಿ ಕಾಯ್ದೆ- 1908ರ ಕಲಂ (5) ಹಾಗೂ ಕಲಂ (6) ರಡಿಯಲ್ಲಿ ಜಾರಿಗೆ ಅನುಷ್ಠಾನಗೊಳಿಸಲಾಗಿರುತ್ತದೆ. ಎನಿ ವೇರ್ ನೋಂದಣಿ ವ್ಯವಸ್ಥೆಯು ಈ ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಈ ಕಾರಣದಿಂದಾಗಿ ಎನಿ ವೇರ್ ನೋಂದಣಿಯನ್ನು ವಿಜಯನಗರ ಜಿಲ್ಲೆಯ ಎಲ್ಲಾ ಉಪನೋಂದಣಿ ಕಚೇರಿಗಳಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಪ್ರಸ್ತುತ ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜನ್ನು ನೋಂದಣಿ ಮಾಡಲು ಅವಕಾಶವಿದ್ದು, ಆದರೆ ಎನಿ ವೇರ್ ನೋಂದಣಿಯಲ್ಲಿ ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ಎನಿ ವೇರ್ ನೋಂದಣಿ ವ್ಯವಸ್ಥೆಯು ಸಾರ್ವಜನಿಕರಿಗೆ ಹಲವಾರು ರೀತಿಯಲ್ಲಿ ಉಪಯುಕ್ತವಾಗಿದ್ದು, ದಸ್ತಾವೇಜಿನ ನೋಂದಣಿಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ. ನೋಂದಣಿಯಲ್ಲಿ ವಿಳಂಬವನ್ನು ತಡೆಗಟ್ಟುತ್ತದೆ. ಸಾರ್ವಜನಿಕರು ಸಮೀಪದಲ್ಲಿರುವ ಉಪನೋಂದಣಿ ಕಚೇರಿಯಲ್ಲಿ ದಸ್ತಾವೇಜನ್ನು ನೋಂದಾಯಿಸಬಹುದು. ಸ್ಲಾಟ್ ಲಭ್ಯವಿರುವಂತಹ ಕಚೇರಿಯನ್ನು ನೋಂದಣಿಗೆ ಆಯ್ಕೆ ಮಾಡಿಕೊಳ್ಳಬಹುದು. ನೋಂದಣಿ ಪ್ರಕ್ರಿಯೆ ಸುಲಭವಾಗುವುದಲ್ಲದೆ ಸಮಯವು ಸಹ ಉಳಿಯುತ್ತದೆ. ಉಪನೋಂದಣಿ ಕಚೇರಿಗಳಲ್ಲಿ ಜನದಟ್ಟಣೆ ಕಡಿಮೆಯಾಗುತ್ತದೆ. ಕಚೇರಿ ಸಿಬ್ಬಂದಿಗಳ ಮೇಲೆ ಕೆಲಸದ ಒತ್ತಡ ಕಡಿಮೆಯಾಗುತ್ತದೆ ಹಾಗೂ ಕಚೇರಿಗಳಲ್ಲಿ ನೋಂದಣಿ ಕೆಲಸ ಸಮಾನವಾಗಿ ಹಂಚಿಕೆಯಾಗುತ್ತದೆ.
ಆದುದರಿಂದ ಸಾರ್ವಜನಿಕರು ಎನಿ ವೇರ್ ನೋಂದಣಿಯ ಸದುಪಯೋಗ ಪಡಿಸಿಕೊಂಡು ತಮಗೆ ಹತ್ತಿರದ ಅಥವಾ ನೋಂದಣಿಗೆ ಸ್ಲಾಟ್ ಲಭ್ಯವಿರುವಂತಹ ಕಚೇರಿ ಆಯ್ಕೆ ಮಾಡಿಕೊಂಡು ದಸ್ತಾವೇಜನ್ನು ನೋಂದಾಯಿಸಿಕೊಳ್ಳಲು ತಿಳಿಸಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿಯ ಪ್ರಕಟಣೆ ತಿಳಿಸಿದೆ.
ಉದಾಹರಣೆಗೆ ಹೊಸಪೇಟೆ ನಗರದ ಆಸ್ತಿಯನ್ನು ಮಾರಾಟ ಅಥವಾ ಖರೀದಿ ಮಾಡಲು ಜಿಲ್ಲೆಯ ಕೂಡ್ಲಿಗಿ ಹಗರಿಬೊಮ್ಮನಹಳ್ಳಿ, ಹರಪನಹಳ್ಳಿ, ಹಡಗಲಿ ತಾಲೂಕುಗಳ ಯಾವುದೇ ಉಪ ನೊಂದಣಿ ಕಚೇರಿಗಳಲ್ಲಿ ಆಸ್ತಿ ನೊಂದಣಿ ಪ್ರಕ್ರಿಯೆ ಮಾಡಿಕೊಳ್ಳಬಹುದಾಗಿರುತ್ತದೆ ಎಂದು ಅವರು ಎನಿ ವೇರ್ ನೋಂದಣಿ ವ್ಯವಸ್ಥೆಯ ಬಗ್ಗೆ ಮಾಹಿತಿ ನೀಡಿದ್ದಾರೆ.
ಹರಪನಹಳ್ಳಿಯ ಹಿರಿಯ ಶ್ರೇಣಿ ನ್ಯಾಯಾಲಯದ
1ನೇ ಅಪರ ಸರ್ಕಾರಿ ವಕೀಲರ ಹುದ್ದೆಗೆ ನೇಮಕಾತಿ ಅಧಿಸೂಚನೆ
ಹೊಸಪೇಟೆ (ವಿಜಯನಗರ) ಆಗಸ್ಟ್ 29 (ಕ.ವಾ): ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ 1ನೇ ಅಪರ ಸರ್ಕಾರಿ ವಕೀಲರ ಹುದ್ದೆಗೆ ಕರ್ನಾಟಕ ಕಾನೂನು ಅಧಿಕಾರಿಗಳು (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು 1977ರ ನಿಯಮ 26(3) ರಡಿ ಹುದ್ದೆಯ ಪ್ರಭಾರವನ್ನು ವಹಿಸಿಕೊಳ್ಳುವ ದಿನಾಂಕದಿAದ ಜಾರಿಗೆ ಬರುವಂತೆ ಒಂದು ವರ್ಷದ ಅವಧಿಗೆ ಅಧಿಸೂಚನೆ ಸಂಖ್ಯೆ: ಲಾ-ಎಲ್ ಎಡಿ/01/2024, ದಿನಾಂಕ: 01.01.2024 ರಂತೆ ನೇಮಕಾತಿ ಮಾಡಲಾಗಿದ್ದು, ಪ್ರಸ್ತುತ ಸದರಿ ಹುದ್ದೆಗೆ ನೇಮಕಾತಿ ಮಾಡಲು ಕಾನೂನು ಇಲಾಖೆಯ ಮಾನ್ಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಅಧಿಸೂಚನೆಯನ್ನು ಹೊರಡಿಸಿರುತ್ತಾರೆ.
ಆದ್ದರಿಂದ ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 1977ರ ನಿಯಮ 5 ಮತ್ತು 26(2) ಹಾಗೂ 12 (ಎ) (ಬಿ) ಮತ್ತು (ಸಿ) ರನ್ವಯ ನೇಮಕಾತಿ ಮಾಡಲು ಏಳು (07) ವರ್ಷಗಳ ಕಾಲ ವಕೀಲ ವೃತ್ತಿ ಪೂರೈಸಿದ ಅರ್ಹ ವಕೀಲರು ತಮ್ಮ ಪೂರ್ಣ ವೈಯಕ್ತಿಕ ಹಾಗೂ ಸೇವಾ ವಿವರಗಳೊಂದಿಗೆ ಲಿಖಿತ ಅರ್ಜಿಯನ್ನು (ನಿಗದಿತ ನಮೂನೆಯಲ್ಲಿ) ದ್ವಿಪ್ರತಿಯಲ್ಲಿ ಜಿಲ್ಲಾಧಿಕಾರಿಗಳು, ವಿಜಯನಗರ ಇವರ ಕಾರ್ಯಾಲಯ ಕಚೇರಿಯ ಸಮಯದಲ್ಲಿ ಖುದ್ದಾಗಿ ಅಥವಾ ಅಂಚೆಯ ಮೂಲಕ ಸೆಪ್ಟೆಂಬರ್ 11ರ ಸಂಜೆ 5.30ರೊಳಗೆ ಸಲ್ಲಿಸಬಹುದಾಗಿದೆ. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳ ಕಚೇರಿಯ ಪ್ರಕಟಣೆ ತಿಳಿಸಿದೆ.

Leave a Reply

error: Content is protected !!