ಈ ವರ್ಷ ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿಯಾಗಿ ಮನನೊಂದು ರೈತ ತಮ್ಮ ಹೊಲದಲ್ಲಿ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ತಮ್ಮ ತಾಯಿಯ ಹೆಸರಿನಲ್ಲಿ ಇರುವ ಜಮೀನಿನ ಮೇಲೆ ಬೆಳೆ ಸಾಲ ಮಾಡಿದ್ದರು. ಬೆಳೆ ವೈಫಲ್ಯದಿಂದ ಮನನೊಂದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.