ಬಳ್ಳಾರಿ : ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಳ್ಳಾರಿ ಸೆಂಟ್ರಲ್ ಜೈಲಗೆ ಬಂದ ಬಳಿಕ ಮೊದಲ ಬಾರಿಗೆ ನಟ ದರ್ಶನ್ ಅವರನ್ನು ಅವರ ಪತ್ನಿ ವಿಜಯಲಕ್ಷ್ಮೀ ಭೇಟಿಯಾದರು. ಪತ್ನಿ ಹಾಗೂ ಪುತ್ರನನ್ನು ಕಂಡಂತ ನಟ ದರ್ಶನ್ ಭಾವುಕರಾಗಿದ್ದಲ್ಲದೇ, ಮಗನನ್ನು ತಬ್ಬಿ ಕಣ್ಣೀರಿಟ್ಟರು ಎಂದು ತಿಳಿದು ಬಂದಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲುಪಾಲಾಗಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯದ ಪೋಟೋ ವೈರಲ್ ಆದ ನಂತರ, ನಟ ದರ್ಶನ್ ಅಂಡ್ ಗ್ಯಾಂಗ್ ಆರೋಪಿಗಳನ್ನು ಬೇರೆ ಬೇರೆ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು.
ಇಂದು ಮೂರು ದಿನಗಳ ನಂತರ ನಟ ದರ್ಶನ್ ಅವರನ್ನು ಅವರ ಪತ್ನಿ ವಿಜಯಲಕ್ಷ್ಮೀ ಹಾಗೂ ಪುತ್ರ ಭೇಟಿಯಾದರು. ಪತ್ನಿ, ಪುತ್ರನನ್ನು ಕಂಡಂತ ನಟ ದರ್ಶನ್ ಭಾವುಕರಾದರು ಎಂಮದು ಮಾಹಿತಿ ಬಂದಿದೆ.