‘ಕೆಎಎಸ್’ ಪೂರ್ವಭಾವಿ ಮರು ಪರೀಕ್ಷೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
ಬೆಂಗಳೂರು : ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೆಷನರಿ “ಕೆಎಎಸ್” ಪೂರ್ವಭಾವಿ ಮರು ಪರೀಕ್ಷೆಯನ್ನು ನಡೆಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಸ್ವತಃ ಸಿಎಂ ಅವರೇ ಮಾಹಿತಿ ಹಂಚಿಕೊಂಡಿರುವ, ‘ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣವೇ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ನಡೆಸುವವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದೇನೆ.
In the light of reports of inappropriate kannada translation of questions in the KPSC Gazetted Probationers' examination, I have directed KPSC to reconduct of the examination within 2 months to ensure fairness to all candidates
“ಕೆಎಎಸ್” ಪೂರ್ವಭಾವಿ ಪರೀಕ್ಷೆಯಯಲ್ಲಿ ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯನ್ನು ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ನಾವು ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕಾರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ.