BREAKING : ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್ ಸೇರಿ ಎಲ್ಲಾ 17 ಆರೋಪಿಗಳ ವಿರುದ್ಧ 3,991 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ!

You are currently viewing BREAKING : ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್ ಸೇರಿ ಎಲ್ಲಾ 17 ಆರೋಪಿಗಳ ವಿರುದ್ಧ  3,991 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ!

ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್ ಸೇರಿ ಎಲ್ಲಾ 17 ಆರೋಪಿಗಳ ವಿರುದ್ಧ 3,991 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೇಜಿಂಗ್ ಸ್ಟಾರ್‌, ನಟ ದರ್ಶನ್ ೭ಹಾಗೂ ಪವಿತ್ರಗೌಡ ಸೇರಿ ಎಲ್ಲಾ 17 ಆರೋಪಿಗಳ ವಿರುದ್ಧ ಇದೀಗ ಪೊಲೀಸರು 3,991 ಪುಟಗಳಷ್ಟು ಚಾರ್ಜ್‌ಶೀಟ್ ಕೋರ್ಟ್ ಗೆ ಪೊಲೀಸರು ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, 3,991 ಪುಟಗಳಷ್ಟು ಚಾರ್ಜ್‌ಶೀಟ್ ನಲ್ಲಿ 10 ಕಡತಗಳು 7 ಸಂಪುಟಗಳು ಇವೆ. ಇದೆ ಸೆಪ್ಟೆಂಬರ್ 9 ಕ್ಕೆ 3 ತಿಂಗಳುಗಳಿವೆ. ಈಗಾಗಲೇ 3,991 ಪುಟಗಳ ಚಾರ್ಜ್‌ಶೀಟ್ ಮುಕ್ತಾಯಗೊಂಡಿದ್ದು, ಎಸಿಪಿ ಕಚೇರಿಯಿಂದ ದೊಡ್ಡ ಬಾಕ್ಸ್ ಗಳಲ್ಲಿ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.

ಪ್ರಕರಣ ದಾಖಲಾದ ಬಳಿಕ 90 ದಿನಗಳ ಒಳಗಾಗಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸುವುದು ನಿಯಮ. ಹಾಗಾಗಿ ಸೆಪ್ಟೆಂಬರ್ 9ಕ್ಕೆ 3 ತಿಂಗಳು ಅಂದರೆ ಸಂಪೂರ್ಣವಾಗಿ 90 ದಿನಗಳು ಮುಗಿಯಲಿವೆ. ಹಾಗಾಗಿ 231 ಕ್ಕೂ ಅಧಿಕ ಸಾಕ್ಷಿಗಳ ಹೇಳಿಕೆಗಳನ್ನು ಉಲ್ಲೇಖಿಸಲಾಗಿದೆ ಎಂದು ಮಾಹಿತಿ ಇದೆ.

Leave a Reply

error: Content is protected !!