You are currently viewing


ಬೆಂಗಳೂರು : ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವೇ ದಿನಗಳುಬಾಕಿ ಉಳಿದಿವೆ. ಕಾಂಗ್ರೆಸ್ ಈಗಾಗಲೇ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಭಾರಿ ಕುತೂಹಲ ಕೆರಳಿಸಿದ್ದ 2ನೇಯ ಅಭ್ಯರ್ಥಿಗಳ ಪಟ್ಟಿಯನ್ನು ಎಐಸಿಸಿ ಇಂದು 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆ ಮಾಡಿದೆ.

ರಾಜ್ಯದಲ್ಲೇ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ವಿಜಯಪುರ ನಗರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಬ್ದುಲ್ ಹಮೀದ್ ಮುಶ್ರೀಫ್ ಅವರನ್ನೇ ಕಣಕ್ಕಿಳಿಸಿದೆ. ಕಳೆದ 2018ರ ಚುನಾವಣೆಯಲ್ಲಿ ಅಬ್ದುಲ್ ಹಮೀದ್ ಮುಶ್ರೀಫ್ ಸುಮಾರು 6000 ಮತಗಳಿಂದ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸೋಲು ಒಪ್ಪಿಕೊಂಡಿದ್ದರು. ಇದೀಗ ಕಾಂಗ್ರೆಸ್ ಅವರನ್ನೇ ಆ ಕ್ಷೇತ್ರದ ಅಭ್ಯರ್ಥಿಯಾಗಿ ಅಧಿಕೃತವಾಗಿ ಘೋಷಣೆ ಮಾಡಿದೆ.

ಇನ್ನು ಇನ್ನು ರಾಜ್ಯದಲ್ಲಿ ಮತ್ತೊಂದು ಹೈ ವೋಲ್ಟೇಜ್ ಕ್ಷೇತ್ರವಾದ ಧಾರವಾಡ ಕ್ಷೇತ್ರದಿಂದ ವಿನಯ್ ಕುಲಕರ್ಣಿ, ಹಾಗೂ ತೀರ್ಥಹಳ್ಳಿ ಕ್ಷೇತ್ರದಿಂದ ಕಿಮ್ಮಾನೆ ರತ್ನಾಕರ್, ಕಲಘಟಗಿ ಕ್ಷೇತ್ರದಿಂದ ಸಂತೋಷ್ ಲಾಡ್ ಗೆ ಟಿಕೆಟ್ ಘೋಷಣೆ ಮಾಡಲಾಗಿದೆ.

Leave a Reply

error: Content is protected !!