LOCAL EXPRESS : ಗಣೇಶನ ಮೂರ್ತಿ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗೆ ಲಾರಿ ಡಿಕ್ಕಿ..! ವಿಘ್ನ ವಿನಾಶಕನಿಗೆ ವಿಘ್ನ..!!

You are currently viewing LOCAL EXPRESS : ಗಣೇಶನ ಮೂರ್ತಿ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗೆ ಲಾರಿ ಡಿಕ್ಕಿ..! ವಿಘ್ನ ವಿನಾಶಕನಿಗೆ ವಿಘ್ನ..!!

ಗಣೇಶನ ಮೂರ್ತಿ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗೆ ಲಾರಿ ಡಿಕ್ಕಿ..!

ಕೊಪ್ಪಳ : ಗಣೇಶನ ಮೂರ್ತಿಯನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಬಂದ ಲಾರಿ ಒಂದು ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿಯಾಗಿ ನಾಲ್ಕು ಜನರಿಗೆ ಗಾಯಗಳಾದ ಘಟನೆ ಸಂಭವಿಸಿದೆ.

ಕೊಪ್ಪಳ ನಗರದಿಂದ ಕುಕನೂರು ತಾಲೂಕಿನ ಮಸಬ ಹಂಚಿನಾಳ ಗ್ರಾಮದ ಯುವಕರು ಗಣೇಶ ಪ್ರತಿಷ್ಠಾಪನೆಗೆಂದು ಮೂರ್ತಿಯನ್ನು ಟ್ರ್ಯಾಕ್ಟರ್ ನಲ್ಲಿ ತೆಗೆದುಕೊಂಡು ಹೋಗುತ್ತಿದ್ದ ವೇಳೆ ನಗರದ ಬೈಪಾಸ್ ರಸ್ತೆಯಲ್ಲಿನ ಕೋಳೂರು ಕ್ರಾಸ್ ಬಳಿ ಹಿಂಬದಿಂದ ಬಂದ ಲಾರಿ ಎಂದು ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿ ಹೊಡೆದು ನಾಲ್ಕು ಜನರಿಗೆ ಗಾಯಗೊಂಡ ಘಟನೆ ಸಂಭವಿಸಿದೆ.

ಅದೃಷ್ಟವಶಾದತ್ ಯಾವುದೇ ಪ್ರಾಣ ಹಾನಿ ಹಾಗೂ ಗಂಭೀರ ಸ್ವಭಾವದ ಗಾಯಗಳು ಸಂಭವಿಸಿರುವುದಿಲ್ಲ. ಈ ಕುರಿತು ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!