Breaking news : ನಟ ಕಿಚ್ಚ ಸುದೀಪ್ ವಿರುದ್ಧ ಚುನಾವಣೆ ಆಯೋಗಕ್ಕೆ ದೂರು..!!

You are currently viewing Breaking news : ನಟ ಕಿಚ್ಚ ಸುದೀಪ್ ವಿರುದ್ಧ ಚುನಾವಣೆ ಆಯೋಗಕ್ಕೆ ದೂರು..!!


ಶಿವಮೊಗ್ಗ: “ನನ್ನ ಕಷ್ಟ ಕಾಲದಲ್ಲಿ ಸಹಾಯ ಸಹಕಾರ ಮಾಡಿದ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ನನ್ನ ಬೆಂಬಲವಿದೆ. ನಾನು ಮಾಮ ಎಂದು ಕರೆಯುವಂತ ಸಿಎಂ ಬೊಮ್ಮಾಯಿ ಅವರ ಪರವಾಗಿ ನಾನು ಚುನಾವಣೆಯಲ್ಲಿ ಪ್ರಚಾರ ಮಾಡುತ್ತೇವೆ” ಎಂದು ನಟ ಕಿಟ್ಟ ಸುದೀಪ್ ( Actor Sudeep ) ನಿನ್ನೆ ಘೋಷಣೆ ಮಾಡಿದರು. ಇದರ ಬೆನ್ನಲ್ಲೇ ವಿಧಾನಸಭಾ ಚುನಾವಣಾ ( Karnataka Assembly Election 2023 ) ಮಾದರಿ ನೀತಿ ಸಂಹಿತೆ ಎಲ್ಲರಿಗೂ ಅನ್ವಯ ಆಗಲಿದೆ. ಹಾಗಾಗಿ ಅವರ ನಟನೆಯ ಚಿತ್ರಗಳನ್ನು ತಡೆ ಹಿಡಿಯುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ವಕೀಲರೊಬ್ಬರು ದೂರು ನೀಡಿದ್ದಾರೆ.

ಈ ಬಗ್ಗೆ ಶಿವಮೊಗ್ಗದ ವಕೀಲ ಕೆ.ಪಿ ಶ್ರೀಪಾಲ ಎಂಬಾತ ರಾಜ್ಯ ಚುನಾವಣಾ ಆಯೋಗದ ಮುಖ್ಯ ಆಯುಕ್ತರಿಗೆ ದೂರು ನೀಡಿದ್ದು, ಮಾದರಿ ನೀತಿ ಸಂಹಿತೆ ಅನುಸಾರ ಮಾನ್ಯ ಕಿಚ್ವ ಸುದೀಪ್ ಇವರ ಚಲನಚಿತ್ರಗಳನ್ನು , ಟಿ.ವಿ.ಶೋಗಳನ್ನು ಹಾಗೂ ಅವರು ನಟಿಸಿರುವ ಜಾಹಿರಾತುಗಳನ್ನು ಚುನಾವಣೆ ಮುಗಿಯುವ ವರೆಗೂ ತಡೆ ಹಿಡಿಯುವಂತೆ ದೂರಿನಲ್ಲಿ ಉಲ್ಲೇಖವಾಗಿದೆ.

ಕನ್ನಡದ ಚಲನಚಿತ್ರ ನಟ ಮಾನ್ಯ ಕಿಚ್ಚ ಸುದೀಪ್ ರವರು ಬಿಜೆಪಿ ಪಕ್ಷದ ಸ್ಟಾರ್, ಪ್ರಚಾರಕರಾಗಿರುವುದರಿಂದ ಚುನಾವಣೆ ಮುಗಿಯುವವರೆಗೂ ಅವರ ನಟನೆಯ ಯಾವುದೇ ಸಿನಿಮಾಗಳು ಚಿತ್ರ ಮಂದಿರಗಳಲ್ಲಿ ಮತ್ತು ಟಿ.ವಿ.ಗಳಲ್ಲಿ ಪ್ರದರ್ಶನವಾಗದಂತೆ ಹಾಗೂ ಅವರು ನಡೆಸಿಕೊಂಡು ಬರುತ್ತಿರುವ ಟಿ.ವಿ.ಶೋಗಳು ಪ್ರಸಾರವಾಗದಂತೆ ಮತ್ತು ಅವರು ನಟಿಸಿರುವ ಜಾಯಿರಾತುಗಳು ಸಹ ಪ್ರಸಾರವಾಗದಂತೆ ಚುನಾವಣಾ ಆಯೋಗ ಕಟ್ಟು ನಿಟ್ಟಿನ ಕ್ರಮಜರುಗಿಸಬೇಕು ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ.

ನಟ ಕಿಚ್ಚ ಸುದೀಪ್ ಅವರು ಒಂದು ರಾಜಕೀಯ ಪಕ್ಷದ ಪರವಾಗಿ ಪ್ರಚಾರಮಾಡುತ್ತಿರುವುದನ್ನು ಅವರೆ ಘೋಷಣೆ ಮಾಡಿದ್ದರಿಂದ ಅವರ ನಟನೆಯ ಚಲನಚಿತ್ರಗಳು, ಮತ್ತು ಟಿ.ವಿ. ಕಾರ್ಯಕ್ರಮಗಳು ಹಾಗೂ ಜಾಹಿರಾತುಗಳು ಮತದಾರರ ಮೇಲೆ ಪ್ರಭಾವ ಬೀರುವುದರಿಂದ ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ ಆಗಿರುತ್ತದೆ. ಆದ್ದರಿಂದ ತಕ್ಷದಿಂದ ಚುನಾವಣಾ ಆಯೋಗ ಈ ವಿಷಯಕ್ಕೆ ಸಂಬಂದಿಸಿದಂತೆ ತುರ್ತು ಕ್ರಮ ಜರುಗಿಸಬೇಕು. ಈ ಹಿನ್ನಲೆಯಲ್ಲಿ ರಾಜ್ಯ ಚುನಾವಣಾ ಆಯೋಗವು ನಟ ಸುದೀಪ್ ಅವರ ಚಿತ್ರಗಳಿಗೆ ನೀತಿ ಸಂಹಿತೆ ಹಿನ್ನಲೆಯಲ್ಲಿ ತಡೆ ನೀಡುತ್ತಾ ಎಂದು ಕಾದು ನೋಡಬೇಕಿದೆ.

Leave a Reply

error: Content is protected !!