2023ರ ಐಪಿಎಲ್ನ 9ನೇ ಪಂದ್ಯದಲ್ಲಿ ಆರ್‌ಸಿಬಿ ಮತ್ತು ಕೆಕೆಆರ್ ತಂಡಗಳು ಮುಖಾಮುಖಿಯಾಗಲಿದೆ. ಇಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್‌ಸಿಬಿ ಪರ ಈ ಆಟಗಾರ ಅಲಭ್ಯರಾಗಿದ್ದಾರೆ ಎಂದು ತಿಳಿದು ಬಂದಿದೆ. ಮೊದಲ ಪಂದ್ಯ ಆಡಿದ್ದ ವೇಗಿ ರೀಸ್ ಟೋಪ್ಲಿ 2ನೇ ಪಂದ್ಯದಲ್ಲಿ ಕಣಕ್ಕಿಳಿಯುತ್ತಿಲ್ಲ. ಆ ಪಂದ್ಯದ ವೇಳೆ ಭುಜಕ್ಕೆ ಗಾಯ ಮಾಡಿಕೊಂಡಿದ್ದರು. ಹೀಗಾಗಿ ಟೋಪ್ಲಿ ವಿಶ್ರಾಂತಿಯ ಕಾರಣ ಕೆಕೆಆರ್ ವಿರುದ್ಧದ ಪಂದ್ಯವನ್ನು ಆಡುತ್ತಿಲ್ಲ.
ಆರ್‌ಸಿಬಿ ಸ್ಟಾರ್ ಆಲ್‌ರೌಂಡರ್ ಆಗಿರುವ ಶ್ರೀಲಂಕಾ ಸ್ಪಿನ್ನರ್ ವನಿಂದು ಹಸರಂಗ ಇನ್ನೂ ಕೂಡ ತಂಡವನ್ನು ಸೇರಿಕೊಂಡಿಲ್ಲ. ಮೊಣಕಾಲಿನ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಆರ್‌ಸಿಬಿಯ ಸ್ಟಾರ್ ಬೌಲರ್ ಜೋಶ್ ಹ್ಯಾಝಲ್ವುಡ್ ಸದ್ಯ ಆಸ್ಟ್ರೇಲಿಯಾದಲ್ಲಿದ್ದಾರೆ. ಅವರು ಆರ್‌ಸಿಬಿ ತಂಡವನ್ನು ಏಪ್ರಿಲ್ 14 ರ ಬಳಿಕ ಸೇರಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ. ಕೆಕೆಆರ್ ವಿರುದ್ಧದ ಪಂದ್ಯಕ್ಕೆ ಈ ಆಟಗಹಾರರು ಅಲಭ್ಯರಾಗಿದ್ದಾರೆ.