ಬೆಂಗಳೂರು : ರಾಜ್ಯದ ಜನರಿಗೆ ಸರ್ಕಾರ ಮತ್ತೆ ಶಾಕಿಂಗ್ ಸುದ್ದಿ ನೀಡಿದ್ದು, ಶೀಘ್ರವೇ ನಂದಿನಿ ಹಾಲಿನ ದರ ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಈ ಮೂಲಕ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಿದ್ದಾರೆ.
ಸೆ.13 ರಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ‘ರೈತರಿಗೆ ಅನುಕೂಲವಾಗಲೆಂದು ನಂದಿನ ಹಾಲಿನ ದರವನ್ನು ಹೆಚ್ಚಳ ಮಾಡಲಾಗುತ್ತದೆ. ಇದು ನಿಮಗಾಗಿ ಸರ್ಕಾರ ಮಾಡುತ್ತಿರುವಂತ ಏರಿಕೆಯಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಈ ಮೂಲಕ ಪ್ರತಿ ಲೀಟರ್ ಹಾಲಿನ ಬೆಲೆಯನ್ನು 5 ರೂ. ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಪ್ರತಿ ಲೀಟರ್ ಹಾಲಿನ ದರವನ್ನು 5 ರೂ.ವರೆಗೆ ಹೆಚ್ಚಳ ಮಾಡುವಂತೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಮನವಿ ಮಾಡಿದ್ದಾರೆ ಹೇಳಲಾಗಿದ್ದು, ನಂದಿನಿ ಹಾಲಿನ ದರ ಹೆಚ್ಚಳದ ಬಗ್ಗೆ ಕೆಎಂಎಫ್ ಜೊತೆಗೆ ಸಭೆ ನಡೆಸಲಾಗುತ್ತದೆ. ಆ ಸಭೆಯ ಬಳಿಕ ಹಾಲಿನ ದರ ಹೆಚ್ಚಳ ಮಾಡುವಂತ ನಿರ್ಧಾರವನ್ನು ಕೈಗೊಳ್ಳಲಾಗುತ್ತದೆ. ನೀವೆಲ್ಲ ನಮ್ಮ ಪರವಾಗಿದ್ದರೇ ಹಾಲಿನ ದರ ಹೆಚ್ಚಳ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.