Post Views: 140
ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ
ಹೊಸಪೇಟೆ(ವಿಜಯನಗರ) : ಶಿಶು ಅಭಿವೃದ್ಧಿ ಯೋಜನೆಯಡಿ ಹೂವಿನಹಡಗಲಿ ವ್ಯಾಪ್ತಿಯಲ್ಲಿ ಖಾಲಿ ಇರುವ 01 ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ 6 ಕೊನೆಯದಿನವಾಗಿದ್ದು, ವೆಬ್‌ಸೈಟ್ ವಿಳಾಸ; https://karnemakaone.kar.nic.in/abcd/ ಮೂಲಕ ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪ ಸಂಖ್ಯಾತ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ ಹೂವಿನಹಡಗಲಿಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ
ಹೊಸಪೇಟೆ(ವಿಜಯನಗರ) : ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಇದರ ಆಧೀನದಲ್ಲಿ ಬರುವ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳಿಂದ 2024-25ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆ (ಮಹಿಳಾ ಸ್ವ-ಸಹಾಯ ಗುಂಪುಗಳಿಗೆ), ಸ್ವಾವಲಂಬಿ ಸಾರಥಿ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಭೂ ಒಡೆತನ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಸೇವಾ ಸಿಂಧು, ಗ್ರಾಮ ಒನ್, ಕರ್ನಾಟಕ ಒನ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನವಾಗಿದ್ದು, ವೆಬ್‌ಸೈಟ್ ಪೋರ್ಟಲ್ ವಿಳಾಸ https://sevasindhu.karnataka.gov.in/Grama one / Karnataka one ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ನಿಗಮದ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಬಳ್ಳಾರಿ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯುಆರ್‌ಡಬ್ಲ್ಯೂ ಹುದ್ದೆಗೆ ಅರ್ಜಿ ಆಹ್ವಾನ
ಹೊಸಪೇಟೆ(ವಿಜಯನಗರ) : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2024-25ನೇ ಸಾಲಿನ ಕೂಡ್ಲಿಗಿ ತಾಲೂಕು ಮತ್ತು ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಹಗರಿಬೊಮ್ಮನಹಳ್ಳಿ ಪುರಸಭೆಯಲ್ಲಿ ಮತ್ತು ಕೂಡ್ಲಿಗಿ ಪಟ್ಟಣ ಪಂಚಾಯತಿಯಲ್ಲಿ ಖಾಲಿ ಇರುವ ತಲಾ ಒಂದು ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳಿಗೆ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿಕಲಚೇತನರು ಅವಶ್ಯಕ ದಾಖಲೆಗಳೊಂದಿಗೆ ನಿಗದಿತ ಅರ್ಜಿಯ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗೆ ಸಂಬAಧಿಸಿದAತೆ ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿರಬೇಕು. 18 ರಿಂದ 45 ವರ್ಷ ವಯೋಮಿತಿ ಹೊಂದಿದವರಾಗಿರಬೇಕು. ವಿಕಲಚೇತನ ಪ್ರತಿಶತ 40% ಮೇಲ್ಪಟ್ಟ ಯು.ಡಿ.ಐ.ಡಿ ಪ್ರಮಾಣ ಪತ್ರ ಹೊಂದಿರಬೇಕು. ತಹಶೀಲ್ದಾರಿಂದ ಪಡೆದ 10 ವರ್ಷದ ವಾಸಸ್ಥಳ ಪ್ರಮಾಣ ಪತ್ರವನ್ನು ಹೊಂದಿರಬೇಕು ಹಾಗೂ ಸ್ಥಳೀಯ ವಿಕಲಚೇತನರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ನಗರ ಪುನರ್ವಸತಿ ಕಾರ್ಯಕರ್ತರನ್ನು ಹಗರಿಬೊಮ್ಮನಹಳ್ಳಿ ಪುರಸಭೆಯ ಮುಖ್ಯಾಧಿಕಾರಿಗಳ ಅಧ್ಯಕ್ಷತೆಯ ಆಯ್ಕೆ ಸಮಿತಿ ಮುಖಾಂತರ ಹಾಗೂ ಕೂಡ್ಲಿಗಿ ತಾಲ್ಲೂಕಿನ ನಗರ ಪುನರ್ವಸತಿ ಕಾರ್ಯಕರ್ತರನ್ನು ಕೂಡ್ಲಿಗಿ ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿಗಳ ಅಧ್ಯಕ್ಷತೆಯ ಆಯ್ಕೆ ಸಮಿತಿ ಮುಖಾಂತರ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಎಮ್‌ಆರ್‌ಡಬ್ಲ್ಯೂ ಲಕ್ಷಣ ಮೊ: 9741185924, ಕೂಡ್ಲಿಗಿ ತಾಲ್ಲೂಕಿನ ಎಮ್‌ಆರ್‌ಡಬ್ಲ್ಯೂ ಚೌಡೇಶ ಬಿ.ಹೆಚ್. ಮೊ: 8217626361 ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಾರ್ಯಾಲಯ, ತಾಲ್ಲೂಕು ಪಂಚಾಯತಿ ಆವರಣ, ಸಂಡೂರು ರಸ್ತೆ, ಹೊಸಪೇಟೆ, ಇವರನ್ನು ಕಛೇರಿಯ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.