ಮುಖ್ಯಮಂತ್ರಿಗಳಿಂದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸುವ ಕಾರ್ಯ: ಶಿವರಾಜ ತಂಗಡಗಿ
ಕೊಪ್ಪಳ : ಮಾನ್ಯ ಸಿದ್ದರಾಮಯ್ಯನವರು ನಮ್ಮ ರಾಜ್ಯದ ಮುಖ್ಯಮಂತ್ರಿಗಳಾದ ಮೇಲೆ ನಮ್ಮ ನಾಡಿನಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸುವ ಕಾರ್ಯವು ಪ್ರತಿ ವರ್ಷ ಆಗುತ್ತಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.
ಐತಿಹಾಸಿಕ ಕೊಪ್ಪಳ ನಗರದ ಅಶೋಕ ವೃತ್ತದಲ್ಲಿ ಸೆ.15ರಂದು ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೊಪ್ಪಳ ಜಿಲ್ಲೆಯಲ್ಲಿ ಪ್ರಜಾಪ್ರಭುತ್ವ ದಿನದ ಮಾನವ ಸರಪಳಿ ರಚನೆ ಕಾರ್ಯಕ್ರಮವು ಜಿಲ್ಲಾಡಳಿತದಿಂದ ಅಚ್ಚುಕಟ್ಟಾಗಿ ಆಯೋಜನೆಯಾಗಿದೆ. ಸಂವಿಧಾನದ ಜೀವಪರ ಸಂದೇಶವನ್ನು ತಿಳಿಸುವ ಕಾರ್ಯವು ಜಿಲ್ಲಾಡಳಿತದಿಂದ ನಡೆಯುತ್ತಿದೆ ಎಂದರು.
ಪ್ರಜಾಪ್ರಭುತ್ವ ದಿನ ಆಚರಣೆಯ ಮೂಲಕ ಹೊಸ ಇತಿಹಾಸ ಬರೆಯುವ ಕಾರ್ಯವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ಸೇರಿದ ಎಲ್ಲರಿಗೂ ರಾಜ್ಯ ಸರ್ಕಾರದ ಪರವಾಗಿ ಅಭಿನಂದನೆ ತಿಳಿಸುವೆ ಎಂದರು.