ಪ್ರಜಾ ವೀಕ್ಷಣೆ ಸುದ್ದಿ ಜಾಲ:-
ಬೆಳ್ಳಂ ಬೆಳಗ್ಗೆ ರಸ್ತೆ ಅಪಘಾತ, ಯರೇಹಂಚಿನಾಳ ಪಿ ಡಿ ಓ ಪರಸ್ಥಿತಿ ಗಂಭೀರ, ಕೊಪ್ಪಳ ಆಸ್ಪತ್ರೆಗೆ ದಾಖಲು.
PV NEWS- ಕುಕನೂರು : ಬೆಳ್ಳಂ ಬೆಳಿಗ್ಗೆ ರಸ್ತೆ ಅಪಘಾತದಲ್ಲಿ ಯರೇ ಹಂಚಿನಾಳ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು ಹೆಚ್ಚಿನ ಚಿಕಿತ್ಸೆಗೆ ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಳಿಸಲಾಗಿದೆ.
ಇಂದು ಮಂಗಳವಾರ ಬೆಳಿಗ್ಗೆ 8.30 ರ ಸುಮಾರಿಗೆ ಯೆರೇಹಂಚಿನಾಳ ಪಿ ಡಿ ಓ ಅಡಿವೆಪ್ಪ ಎಂಬುವವರು ಇಟಗಿಯಿಂದ ಕುಕನೂರು ಕಡೆ ಬೈಕ್ ನಲ್ಲಿ ಬರುತ್ತಿರುವಾಗ ಮಾರ್ಗಮದ್ಯದಲ್ಲಿ ಆಕ್ಸಿಡೆಂಟ್ ಆಗಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹತ್ತಿರದ ಕುಕನೂರು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗೆ ಕೊಪ್ಪಳ ಜಿಲ್ಲಾ ಆಸ್ಪತ್ರೆ ಗೆ ಕರೆದೋಯ್ಯಲಾಗಿದೆ ಎಂದು ತಿಳಿದು ಬಂದಿದೆ.