ಬೆಂಗಳೂರು : ಮುಂಬರುವ ವಿಧಾನಸಭೆ ಚುನಾವಣೆಗೆ ಇಂದು ಕಾಂಗ್ರೆಸ್ 2 ನೇ ಪಟ್ಟಿ ಬಿಡುಗಡೆ ಮಾಡಿದ್ದು, ಇದೀಗ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಭಿನ್ನಮತ ಸ್ಪೋಟವಾಗಿದೆ. ಈ ಹಿನ್ನೆಲೆಯಲ್ಲಿ ಹಲವಾರ ಕಡೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಪಕ್ಷದ ನಿರ್ಧಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಹಲವು ಕ್ಷೇತ್ರಗಳಲ್ಲಿ ಟಿಕೆಟ್ ಕೈ ತಪ್ಪಿದ್ದಕ್ಕೆ ಕಾಂಗ್ರೆಸ್ ನಾಯಕರು ಅಸಮಾಧಾನ ಹೊರ ಹಾಕಿದ್ದು, ಚಿತ್ರದುರ್ಗ, ಕಲಘಟಕಿ ಕ್ಷೇತ್ರಗಳಲ್ಲೂ ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇನ್ನೂ ದಾರವಾಢ ಜಿಲ್ಲೆಯ ಕಲಘಟಗಿ ಕ್ಷೇತ್ರದಲ್ಲಿ ಸಂತೋಷ್ ಲಾಡ್ ಗೆ ಟಿಕೆಟ್ ನೀಡಿದ ಹಿನ್ನೆಲೆಯಲ್ಲಿ ‘ನಾಗರಾಜ್ ಛಬ್ಬಿ’ ಅಸಮಾಧಾನಗೊಂಡಿದ್ದು, ಅವರು ರಾಜೀನಾಮೆ ನೀಡುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ. ಇಂದು ನಾಗರಾಜ್ ಛಬ್ಬಿ’ ರಾತ್ರಿ ಆಪ್ತರ ಜೊತೆ ರಹಸ್ಯ ಸಭೆ ಕೂಡ ಕರೆದಿದ್ದಾರೆ ಎನ್ನಲಾಗಿದೆ.
ಮಂಡ್ಯದಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿ ಕೆಲ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.ಇತ್ತ ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ಅಶೋಕ್ ಪೂಜಾರಿಗೆ ಟಿಕೆಟ್ ಕೈ ತಪ್ಪಿದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.