JOB ALERT : ಸರ್ಕಾರಿ ಉದ್ಯೋಗ ಅರಸುತ್ತಿರುವವರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿ: 247 PDO ಹುದ್ದೆಗಳ ನೇಮಕಕ್ಕೆ ಮತ್ತೆ ಅರ್ಜಿ ಆಹ್ವಾನ..!
ಬೆಂಗಳೂರು : ಸರ್ಕಾರಿ ಉದ್ಯೋಗ ಅರಸುತ್ತಿರುವವರಿಗೆ ರಾಜ್ಯ ಸರ್ಕಾರವೂ ಭರ್ಜರಿ ಸಿಹಿ ಸುದ್ದಿ ನೀಡಿದೆ. ಸರ್ಕಾರವು ಎಲ್ಲಾ ಪ್ರವರ್ಗಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷ ಸಡಿಲಿಸಿರುವ ಹಿನ್ನಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ 247 ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ಭರ್ತಿಗೆ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ.
ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷ ಸಡಿಲಿಕೆ ನೀಡಿ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕಾಲಾವಕಾಶವನ್ನುಕರ್ನಾಟಕ ಲೋಕಸೇವಾ ಆಯೋಗ ಕಲ್ಪಿಸಿದೆ. ಈ ಮೂಲಕ ತಿದ್ದುಪಡಿ ಅಧಿಸೂಚನೆ ಹೊರಡಿಸಲಾಗಿದೆ ಎಂದು ತಿಳಿಸಿದೆ.
ಅದೇ ರೀತಿ 247 ಪಿಡಿಒ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 3 ಕೊನೆಯ ದಿನವಾಗಿದೆ. ಅರ್ಜಿಯನ್ನು www.kapsc.kar.nic.in ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಪಿಎಸ್ಐ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿ (PSI Recruitment Exam )
ಅಕ್ಟೋಬರ್ 03-ರಂದು ಬೆಳಿಗ್ಗೆ 10.30ರಿಂದ 12 ಗಂಟೆಯವರೆಗೆ ಪತ್ರಿಕೆ-1ರ ಪರೀಕ್ಷೆ ನಡೆಯಲಿದೆ. ಮಧ್ಯಾಹ್ನ 12.30ರಿಂದ 2 ಗಂಟೆಯವರೆಗೆ ಪತ್ರಿಕೆ-2ರ ಪರೀಕ್ಷೆ ನಡೆಯಲಿದೆ.
ಗ್ರಾಮ ಆಡಳಿತಾಧಿಕಾರಿ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆ ವೇಳಾಪಟ್ಟಿ
ದಿನಾಂಕ ಸೆಪ್ಟಂಬರ್ 29 ರಂದು ಭಾನುವಾರ ಬೆಳಿಗ್ಗೆ 10.30ರಿಂದ 12.30ರವರೆಗೆ ಕಡ್ಡಾಯ ಕನ್ನಡ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗೆ ಹಾಜರಾಗಿ ಅರ್ಹತೆಗಳಿಸಿದ್ದಲ್ಲಿ ಮಾತ್ರ ಮುಖ್ಯ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ.
ಅಕ್ಟೋಬರ್26ರ ಶನಿವಾರದಂದು ಜಿಟಿಟಿಸಿಯ ವಿವಿಧ ಹುದ್ದೆಗಳಿಗೆ ಮಧ್ಯಾಹ್ನ 2.30ರಿಂದ 4.30ರವರೆಗೆ ಕಡ್ಡಾಯ ಕನ್ನಡ ಪರೀಕ್ಷೆ ನಡೆಯಲಿದೆ. ವಯೋಮಿತಿ ಸಡಿಲಿಕೆಯಿಂದ ಹೊಸದಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾತ್ರವೇ ಈ ಪರೀಕ್ಷೆ ನಡೆಸಲಾಗುತ್ತಿದೆ.
ಗ್ರಾಮ ಆಡಳಿತಾಧಿಕಾರಿ ನೇಮಕಾತಿ ಪರೀಕ್ಷೆ ವೇಳಾಪಟ್ಟಿ
ಅಕ್ಟೋಬರ್ 27 ರಂದು ಬೆಳಿಗ್ಗೆ 10.30ರಿಂದ 12.30ರವರೆಗೆ ಪತ್ರಿಕೆ-1, ಮಧ್ಯಾಹ್ನ 2.30ರಿಂದ 4.30ರವರೆಗೆ ಪತ್ರಿಕೆ-2ರ ಪರೀಕ್ಷೆ ನಡೆಯಲಿದೆ.
ಕೆಸೆಟ್ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿ (KSET Exam 2024)
1) ನವೆಂಬರ್ 24ರಂದು ಬೆಳಿಗ್ಗೆ 10 ರಿಂದ 1 ಗಟೆಯವರೆಗೆ ಪತ್ರಿಕೆ 1 ಮತ್ತು 2ರ ಪರೀಕ್ಷೆ ನಡೆಯಲಿದೆ.
ಹೀಗಿದೆ ರಾಯಚೂರು ವಿವಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷಾ ವೇಳಾಪಟ್ಟಿ
2) ನವೆಂಬರ್ 24ರಂದು ಬೆಳಿಗ್ಗೆ 11 ರಿಂದ 1 ಗಂಟೆಯವರೆಗೆ ಪತ್ರಿಕೆ-2 ಹಾಗೂ 3 ಗಂಟೆಯಿಂದ 4 ಗಂಟೆಯವರೆಗೆ ಪತ್ರಿಕೆ-1ರ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.