BIG NEWS : “ಒಂದು ರಾಷ್ಟ್ರ, ಒಂದು ಚುನಾವಣೆ” ಶಿಫಾರಸ್ಸು : ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ!

You are currently viewing BIG NEWS : “ಒಂದು ರಾಷ್ಟ್ರ, ಒಂದು ಚುನಾವಣೆ” ಶಿಫಾರಸ್ಸು : ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ!

“ಒಂದು ರಾಷ್ಟ್ರ, ಒಂದು ಚುನಾವಣೆ” ಶಿಫಾರಸ್ಸು : ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ!

ನವದೆಹಲಿ : ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ  ವರದಿಯು “ಒಂದು ರಾಷ್ಟ್ರ, ಒಂದು ಚುನಾವಣೆ” ಶಿಫಾರಸ್ಸಿನ ಮಾಡಿತ್ತು, ಈ ಇದನ್ನುನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಈ ಪ್ರಕಾರ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ಪ್ರಸ್ತಾಪಿಸಲಾಗಿದೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ರಚಿಸಲಾದ ಸಮಿತಿಯು ಇತರ ದೇಶಗಳ ಚುನಾವಣಾ ಪ್ರಕ್ರಿಯೆಗಳನ್ನು ಅಧ್ಯಯನ ಮಾಡಿದೆ.

ಅದು ಅಲ್ಲದೆ, 39 ರಾಜಕೀಯ ಪಕ್ಷಗಳು, ಅರ್ಥಶಾಸ್ತ್ರಜ್ಞರು ಮತ್ತು ಭಾರತದ ಚುನಾವಣಾ ಆಯೋಗವನ್ನು ಸಹ ಸಮಾಲೋಚಿಸಲಾಗಿದೆ. ಈ ನಿಟ್ಟಿನಲ್ಲಿ ಸುಮಾರು 18,000 ಪುಟಗಳ ವರದಿಯನ್ನು ಮಂಡಿಸಲಾಗಿದೆ. ಈ ಪ್ರಸ್ತಾವನೆಯನ್ನು ಮೋದಿ ಸರ್ಕಾರವು ದೀರ್ಘಕಾಲದಿಂದ ಬೆಂಬಲಿಸುತ್ತಿದೆ. ಕೊನೆಗೂ ಇಂದು ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ತಿಳಿದು ಬಂದಿದೆ.

Leave a Reply

error: Content is protected !!