BREAKING : 40% ಕಮಿಷನ್‌ ಆರೋಪ ಮಾಡಿದ್ದ, ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ನಿಧನ..!!

You are currently viewing BREAKING : 40% ಕಮಿಷನ್‌ ಆರೋಪ ಮಾಡಿದ್ದ, ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ನಿಧನ..!!

40% ಕಮಿಷನ್‌ ಆರೋಪ ವಿಚಾರದಲ್ಲಿ ರಾಜ್ಯ ರಾಜಕೀಯದಲ್ಲಿ ಸಂಚನ ಮೂಡಿಸಿದ್ದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ನಿಧನ..!!

ಬೆಂಗಳೂರು : ಈ ಹಿಂದನ ಬಿಜೆಪಿ ಸರ್ಕಾರದ ಅವಧಿಯಲ್ಲಿ 40 % ಕಮಿಷನ್ ಆರೋಪ ಮಾಡಿ ರಾಜ್ಯ ರಾಜಕೀಯದಲ್ಲಿ ಸಂಚನ ಮೂಡಿಸಿದ್ದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ವಿಧಿವಶರಾಗಿದ್ದಾರೆ‌ ಎಂದು ತಿಳಿದು ಬಂದಿದೆ. 

ಇಂದು ಅವರು (ಗುರುವಾರ) ಬೆಳಗ್ಗೆ 10 ಗಂಟೆ 6 ನಿಮಿಷಕ್ಕೆ ನಿಧನರಾಗಿದ್ದಾರೆ ಎಂದು‌ ಕುಟುಂಬದ ಮೂಲಗಳು ತಿಳಿಸಿವೆ. ಕೆಂಪಣ್ಣ ಅವರಿಗೆ 84 ವರ್ಷ ವಯಸ್ಸಾಗಿತ್ತು.

ಅವರ ನಿಧನಕ್ಕೆಮುಖ್ಯಂಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಬರೆದಿರುವ ಸಿಎಂ, ‘ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರ ನಿಧನವಾರ್ತೆ ನೋವುಂಟುಮಾಡಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ದೇಶಾದ್ಯಂತ ಸುದ್ದಿ ಮಾಡಿದ್ದ 40% ಕಮಿಷನ್ ಹಗರಣವನ್ನು ಹೊರತಂದು, ಗುತ್ತಿಗೆ ಕಾಮಗಾರಿಗಳಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರದ ವಿರುದ್ಧ ಅವರು ಸೆಟೆದು ನಿಂತಿದ್ದರು. ಯಾವುದೇ ಒತ್ತಡ, ಆಮಿಷಗಳಿಗೆ ಒಳಗಾಗದ ನಿರ್ಭೀತ ಧ್ವನಿಯೊಂದನ್ನು ನಾಡು ಇಂದು ಕಳೆದುಕೊಂಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಸಂತಾಪ ತಿಳಿಸಿದ್ದಾರೆ.

Leave a Reply

error: Content is protected !!