ಬೆಂಗಳೂರು : ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಮುನಿರತ್ನ ಈಗಾಗಲೇ ಜಾತಿನಿಂದನೆ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಇದೀಗ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿದಂತ ಆರೋಪ ಸಂಬಂಧ ಶಾಸಕ ಮುನಿರತ್ನ ಸೇರಿದಂತೆ 7 ಮಂದಿ ವಿರುದ್ಧ ದೂರು ದಾಖಲಾಗಿದೆ. ಈ ಮೂಲಕ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾದಂತೆ ಆಗಿದೆ.

ಈ ಬಗ್ಗೆ ಮಹಿಳೆಯೊಬ್ಬರು ಕಗ್ಗಲೀಪುರ ಪೊಲೀಸ್ ಠಾಣೆಗೆ ತೆರಳಿ ಶಾಸಕ ಮುನಿರತ್ನ ಸೇರಿದಂತೆ 7 ಮಂದಿ ವಿರುದ್ಧ ಅತ್ಯಾಚಾರ ಆರೋಪ ಮಾಡಿ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಪೊಲೀಸರು ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಸ್ಥಳ ಮಹಜರು ಕೂಡ ನಡೆಸುತ್ತಿದ್ದಾರೆ.