ಅತ್ಯುತ್ತಮ ವಾಹನ ಚಾಲಕಿ ಗಾಯತ್ರಿಗೆ ಜಿಲ್ಲಾಡಳಿತದಿಂದ ಸನ್ಮಾನ
ಕೊಪ್ಪಳ : ಪ್ರತಿದಿನ ಘನತ್ಯಾಜ್ಯ ವಿಲೇವಾರಿ ಮಾಡುವಲ್ಲಿ ಗ್ರಾಮ ಪಂಚಾಯತ್‌ನಲ್ಲಿ ಅತ್ಯುತ್ತಮವಾಗಿ ವಾಹನ ಚಾಲಕರಾಗಿ ಕಾರ್ಯನಿರ್ವಹಿಸುತ್ತಿರುವ ಜಿರಾಳ ಗ್ರಾಮ ಪಂಚಾಯತ್‌ನ ಗಾಯತ್ರಿ ಅವರಿಗೆ ಜಿಲ್ಲಾಡಳಿತದಿಂದ ಸೆ.17ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 77ನೇ ಕಲ್ಯಾಣ ಕರ್ನಾಟಕ ಉತ್ಸವ ದಿನದ ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಪ್ರತಿದಿನ ಘನತ್ಯಾಜ್ಯ ವಿಲೇವಾರಿ ಮಾಡುವ ಟ್ರಾಕ್ಟರ್ ನಡೆಸಿಕೊಂಡೇ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸಿದ ಗಾಯತ್ರಿ ಅವರಿಗೆ ವೇದಿಕೆಗೆ ಆಹ್ವಾನಿಸಿ, ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ, ಸಂಸದರಾದ ಕೆ.ರಾಜಶೇಖರ ಹಿಟ್ನಾಳ್, ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ ಮತ್ತು ಹೇಮಲತಾ ನಾಯಕ ಅವರು ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ರಾಮ್ ಎಲ್. ಅರಸಿದ್ದಿ, ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾವ್ಯ ಚತುರ್ವೇದಿ, ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಹೇಮಂತಕುಮಾರ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಹಾಗೂ ಇನ್ನೀತರರು ಇದ್ದರು.