LOCAL NEWS : ರಸ್ತೆ ಅಭಿವೃದ್ಧಿಗಾಗಿ ಹೆಚ್ ಸಿ ಬಾಲಕೃಷ್ಣ ಅವರನ್ನು ಭೇಟಿ ಮಾಡಿದ ಶಾಸಕ ಡಾ. ಚಂದ್ರು ಲಮಾಣಿ

You are currently viewing LOCAL NEWS : ರಸ್ತೆ ಅಭಿವೃದ್ಧಿಗಾಗಿ ಹೆಚ್ ಸಿ ಬಾಲಕೃಷ್ಣ ಅವರನ್ನು ಭೇಟಿ ಮಾಡಿದ ಶಾಸಕ ಡಾ. ಚಂದ್ರು ಲಮಾಣಿ

ರಸ್ತೆ ಅಭಿವೃದ್ಧಿಗಾಗಿ ಹೆಚ್ ಸಿ ಬಾಲಕೃಷ್ಣ ಅವರನ್ನು ಭೇಟಿ ಮಾಡಿದ ಶಾಸಕ ಡಾಕ್ಟರ್ ಚಂದ್ರು ಲಮಾಣಿ

ಶಿರಹಟ್ಟಿ : ಬೆಂಗಳೂರಿನ (KRDCL) ಕಛೇರಿಯಲ್ಲಿ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಹೆಚ್.ಸಿ ಬಾಲಕೃಷ್ಣ ಅವರನ್ನು ಮಾನ್ಯ ಜನಪ್ರಿಯ ಶಾಸಕರಾದ ಡಾ ಚಂದ್ರು ಲಮಾಣಿ ಯವರು ಬೇಟಿ ಮಾಡಿ, ಶಿರಹಟ್ಟಿ ಮತಕ್ಷೇತ್ರದ ಹಲವಾರು ಗ್ರಾಮಗಳಲ್ಲಿ ಅತಿವೃಷ್ಠಿಯಿಂದ ಗ್ರಾಮದಲ್ಲಿರುವ ರಸ್ತೆ ಸಂಪರ್ಕ ಹಾಗೂ ಸೇತುವೆಗಳು ಹಾಳಾಗಿದ್ದು ರೈತರಿಗೆ ಹೊಲಗಳಿಗೆ ತೆರಳಲು ತೊಂದರೆಯಾಗುತ್ತಿದೆ.

ಇದರಿಂದ ಜನರಿಗೆ ಭಾರಿ ನಷ್ಟ ಉಂಟಾಗಿದ್ದು. ಆಗಿರುವ ನಷ್ಟದ ಬಗ್ಗೆ ಮನವರಿಕೆ ಮಾಡಿ ರಸ್ತೆ ಹಾಗೂ ಸೇತುವೆಗಳ ಮರು ನಿರ್ಮಾಣಕ್ಕಾಗಿ ಹೆಚ್ಚಿನ ಅನುದಾನವನ್ನು ನೀಡಬೇಕೆಂದು ಮನವಿ ಸಲ್ಲಿಸಿದರು,

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆದಷ್ಟುಬೇಗ ಅನುದಾನವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ .

ವರದಿ: ವೀರೇಶ್ ಗುಗ್ಗರಿ

Leave a Reply

error: Content is protected !!