ರೈತ ಜೀವನದಿ ಕಳಸ ಬಂಡೂರಿ ಮಹದಾಯಿ ನದಿ ಜೋಡಿನೆ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ
ಗದಗ : ನರಗುಂದದಿಂದ ಗದಗ ಜಿಲ್ಲಾ ಕಚೇರಿಗೆ ಎರಡು ದಿನದ ಬೃಹತ್ ಪಾದಯಾತ್ರೆ ಕೈಗೊಂಡು ಗದಗ್ ಜಿಲ್ಲಾಧಿಕಾರಿ ಕಚೇರಿಗೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಕುಮಾರ್ ಶೆಟ್ಟಿ ಬಣ ಕರವೇ ರಾಜ್ಯದ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ಮತ್ತು ಉತ್ತರ ಕರ್ನಾಟಕ ಕರವೇ ಅಧ್ಯಕ್ಷರಾದ ಶರಣು ಬಿ ಗದ್ದುಗೆ ಇವರ ನೇತೃತ್ವದಲ್ಲಿ ಉತ್ತರ ಕರ್ನಾಟಕದ ರೈತರ ಜೀವನದಿ ಕಳಸ ಬಂಡೂರಿ ಮಹದಾಯಿ ನದಿ ಯೋಜನೆ ಜಾರಿಗೊಳಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಕಳಸಾ ಬಂಡೂರಿ ಮಹದಾಯಿ ನದಿ ನೀರು ಹಂಚಿಕೆ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷ ತಾಲೂಕ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗಿಯಾಗಿದ್ದರು.