ಸೆಪ್ಟಂಬರ್ 26ಕ್ಕೆ ಸರಕಾರ ಮಹತ್ವಾಕಾಂಕ್ಷಿ ಯೋಜನೆಯಾದ ಕೆಎಚ್ಐಆರ್ (ನಾಲೆಡ್ಜ್-ಹೆಲ್ತ್-ಇನ್ನೋವೇಶನ್-ರೀಸರ್ಚ್-First Knowledge Health Innovation Research-City) ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ.
PV NEWS-ಬೆಂಗಳೂರು : ರಾಜ್ಯ ಸರಕಾರದ ಅತ್ಯಂತ ಮಹತ್ವಾಕಾಂಕ್ಷಿ ಯೋಜನೆಯಾದ ಕೆಎಚ್ಐಆರ್ (ನಾಲೆಡ್ಜ್-ಹೆಲ್ತ್-ಇನ್ನೋವೇಶನ್-ರೀಸರ್ಚ್-First Knowledge Health Innovation Research-City) ಸಿಟಿಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ ಸೆಪ್ಟಂಬರ್26ರಂದು ಚಾಲನೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
ಇದರ ಅಂಗವಾಗಿ ಅಂದು ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಕಾರ್ಯಕ್ರಮ ಏರ್ಪಡಿಸಿದ್ದು, ಇದರಲ್ಲಿ ದೇಶ-ವಿದೇಶಗಳ ಗಣ್ಯ ಉದ್ಯಮಿಗಳು, ಶಿಕ್ಷಣ ತಜ್ಞರು, ಸಂಶೋಧಕರು ಹಾಗೂ ವೈದ್ಯಕೀಯ ಕ್ಷೇತ್ರದ ಸಾಧಕರು ಭಾಗವಹಿಸಲಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ನಿನ್ನೆ (ಭಾನುವಾರ) ಮಾಹಿತಿ ನೀಡಿರುವ ಸಚಿವ ಎಂ.ಬಿ.ಪಾಟೀಲ, ‘ಒಟ್ಟು 2,000 ಎಕರೆ ವಿಸ್ತೀರ್ಣದಲ್ಲಿ ಈ ಯೋಜಿತ ನಗರ ಮೈದಾಳಲಿದೆ. ಈ ಪೈಕಿ ಮೊದಲ ಹಂತದಲ್ಲಿ 500 ಎಕರೆಯಲ್ಲಿ ಕೆಎಚ್ಐಆರ್ ಸಿಟಿ ಸಾಕಾರಗೊಳ್ಳಲಿದೆ. ಸುಮಾರು 40 ಸಾವಿರ ಕೋಟಿ ರೂ. ಹೂಡಿಕೆಯ ಈ ಯೋಜನೆಯಿಂದ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಒಂದು ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ’ ಎಂದು ಅವರು ತಿಳಿಸಿದ್ದಾರೆ.