ವಿದ್ಯಾವಂತ ನಿರುದ್ಯೋಗಿ ಮಹಿಳೆಯರಿಗೆ ಸರ್ಕಾರಿ ಉದ್ಯೋಗದ ಅವಕಾಶ!
PV NEWS-ಯಲಬುರ್ಗಾ-ಕುಕನೂರು : ಜಿಲ್ಲೆಯ ವಿದ್ಯಾವಂತ ನಿರುದ್ಯೋಗಿ ಮಹಿಳೆಯರಿಗೆ ಸರ್ಕಾರಿ ಉದ್ಯೋಗದ ಸುವರ್ಣಾವಕಾಶ ಒದಗಿ ಬಂದಿದ್ದು, ಜಿಲ್ಲಾದ್ಯಾಂತ ಕಾರ್ಯಕರ್ತೆ ಮತ್ತು ಸಹಾಯಕಿಯರ ಆಯ್ಕೆಯ ಮಾರ್ಗಸೂಚಿಯನ್ನು ಜಿಲ್ಲಾಧಿಕಾರಿ ನೇಮಕಾತಿ ಅಧಿಸೂಚನೆ ಹೊರಡಿಸಿದ್ದಾರೆ.
ಅದರಂತೆ ಅವಳಿ ತಾಲೂಕಿನ ಬಡ ವಿದ್ಯಾವಂತ ನಿರುದ್ಯೋಗಿ ಮಹಿಳೆಯರಿಗೆ ಸರ್ಕಾರಿ ಉದ್ಯೋಗದ ಅವಕಾಶ ಇದ್ದು, ಯಲಬುರ್ಗಾ-ಕುಕನೂರು ತಾಲೂಕುಗಳಲ್ಲಿ 16 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ ಮತ್ತು 67ಸಹಾಯಕಿಯರ ಹುದ್ದೆಗೆ 67 ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ ಎಂದು ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಅಧಿಸೂಚನೆಯಲ್ಲಿ ತಿಳಿದು ಬಂದಿದೆ.
ಕೊಪ್ಪಳ ಜಿಲ್ಲೆಯ 05 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಆನ್ ಲೈನ್ ಮೂಲಕ ಅರ್ಜಿಗಳು ಆಹ್ವಾನಿಸಿದೆ. ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ಅಂಗನವಾಡಿ ಕಾರ್ಯಕರ್ತೆ 4, ಮತ್ತು ಸಹಾಯಕಿ 57, ಕನಕಗಿರಿ ತಾಲೂಕಿನಲ್ಲಿ ಅಂಗನವಾಡಿ ಕಾರ್ಯಕರ್ತೆ 47 ಮತ್ತು ಸಹಾಯಕಿ 102, ಕೊಪ್ಪಳ ತಾಲೂಕಿನಲ್ಲಿ ಅಂಗನವಾಡಿ ಕಾರ್ಯಕರ್ತೆ 09 ಮತ್ತು ಸಹಾಯಕಿ 88,ಕುಷ್ಟಗಿ ತಾಲೂಕಿನಲ್ಲಿ ಅಂಗನವಾಡಿ ಕಾರ್ಯಕರ್ತೆ 11 ಮತ್ತು ಸಹಾಯಕಿ 60, ಯಲಬುರ್ಗಾ ತಾಲೂಕಿನಲ್ಲಿ ಅಂಗನವಾಡಿ ಕಾರ್ಯಕರ್ತೆ 16 ಮತ್ತು ಸಹಾಯಕಿ 67 ಒಟ್ಟು ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ 87, 374 ಸಹಾಯಕಿಯರ ಹುದ್ದೆಗೆ ನೇಮಕಾತಿ ನಡೆಯಲಿದೆ.
ವಿಶೇಷ ಸೂಚನೆ :-
ಇಂದಿನಿಂದ 23-09-2024 ರಿಂದ 23-10-2024ರವೆರೆ ಆನ್ ಲೈನ್ ಅರ್ಜಿ ಆಹ್ವಾನ ಅವಕಾಶವಿದೆ.
ವಿದ್ಯಾರ್ಹತೆ :- ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಪಿಯುಸಿ ಉತ್ತೀರ್ಣರಾಗಿರಬೇಕು.
ಅಂಗನವಾಡಿ ಕಾರ್ಯಕರ್ತೆ – ಕನಿಷ್ಠ ಪಿಯುಸಿ ತೇರ್ಗಡೆ ಹೊಂದಿರಬೇಕು. ಎಸ್.ಎಸ್.ಎಲ್.ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.
ಅಂಗನವಾಡಿ ಸಹಾಯಕಿ – ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ: ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. (ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.)
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ: ಅಂಗನವಾಡಿ ಕಾರ್ಯಕರ್ತೆ ಹುದ್ದೆ ಖಾಲಿಯಿರುವ / ಹೊಸ ಕೇಂದ್ರ ಪ್ರಾರಂಭಿಸುತ್ತಿರುವ ಗ್ರಾಮದಲ್ಲಿ ವಾಸಿಸುತ್ತಿರುವ ಸಹಾಯಕಿಯರಿದ್ದು, ಅವರು ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿದ್ದು, ಕನಿಷ್ಠ 3 ವರ್ಷ ಸೇವೆ ಸಲ್ಲಿಸಿದ್ದು, 45 ವರ್ಷ ವಯೋಮಿತಿಯೊಳಗಿದ್ದು, ಅಂಗನವಾಡಿ ಕೇಂದ್ರದಿಂದ 3 ಕಿ.ಮೀ. ವ್ಯಾಪ್ತಿಯೊಳಗೆ ವಾಸಿಸುತ್ತಿದ್ದು, ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ ಆ ಅಂಗನವಾಡಿ ಕೇಂದ್ರಕ್ಕೆ ಕಾರ್ಯಕರ್ತೆ ಹುದ್ದೆಗೆ ಬೇರೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಪ್ರಮೇಯವಿರುವುದಿಲ್ಲ. ಸದರಿ ಸಹಾಯಕಿಯನ್ನೇ ಕಾರ್ಯಕರ್ತೆ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.
ಆಯ್ಕೆಯಾದ ಅಭ್ಯರ್ಥಿಗಳ ಮಾಸಿಕ ಗೌರವ ಧನ,
ಅಂಗನವಾಡಿ ಕಾರ್ಯಕರ್ತೆ :ರೂ.10,000/-
ಅಂಗನವಾಡಿ ಸಹಾಯಕಿ : ರೂ.5,000/-
“ಅವಳಿ ತಾಲೂಕಿನ ಕಂದಾಯ ಗ್ರಾಮಗಳ ವ್ಯಾಪ್ತಿಗೆ ಬರುವ ಗ್ರಾಮಗಳಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳು ಖಾಲಿ ಇದ್ದು, ಹಾಗಾಗಿ ಇಂದು ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಪ್ಪಳ ಇವರಿಂದ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮಹಿಳೆಯರು ತಪ್ಪದೇ ಹತ್ತಿರ ಆನ್‌ಲೈನ್ ಸೆಂಟರ್‌ಗಳಿಗೆ ಭೇಟಿ ನೀಡಿ, ಈ ಹುದ್ದೆ ಅರ್ಜಿ ಸಲ್ಲಿಸಿ. ಇದರಿಂದ ಅರ್ಹ ವಿದ್ಯಾವಂತ ನಿರುದ್ಯೋಗಿ ಮಹಿಳೆಯರಿಗೆ ಸಹಾಯಕಾರಿ ಆಗಲಿದೆ”