PV NEWS-ಬೆಳಗಾವಿ : ರಾಜ್ಯಾದ್ಯಂತ ಭಾರಿ ಸದ್ದು ಮಾಡಿದ್ದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಆ ಮೂಲಕ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.
ಈ ಕುರಿತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪೋಟಕವಾದ ಹೇಳಿಕೆ ನೀಡಿದ್ದು, ‘ಒಂದು ವೇಳೆ ತನಿಖೆಯಲ್ಲಿ ತಪ್ಪು ಕೊಂಡು ಬಂದರೆ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕಾಗುತ್ತದೆ ಎಂದು ತಿಳಿಸಿದರು.
ಇಂದು ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂಬ ಬಿಜೆಪಿ ಹೋರಾಟಕ್ಕೆ ಅರ್ಥವಿಲ್ಲ. ಹೈಕೋರ್ಟ್ ತನಿಖೆಗೆ ಆದೇಶ ನೀಡಿದೆ ಅಷ್ಟೇ. ತನಿಖೆಯಾಗಲಿ. ತಪ್ಪು ಕಂಡುಬಂದರೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಈ ಬಗ್ಗೆ ಪ್ರತಿಕ್ರಿಯೆ ನೀಡಿದರು.