ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಅನಿರ್ದಿಷ್ಟಾವಧಿ ಹೋರಾಟ!
ಲಕ್ಷ್ಮೇಶ್ವರ : ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ಯ ಇಲಾಖೆ ವ್ಯಾಪ್ತಿಯ ಅಧಿಕಾರಿಗಳು ಮತ್ತು ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಕ್ಟೋಬರ್ 4 ರಿಂದ ರಾಜ್ಯದ್ಯಂತ ಗ್ರಾಮ ಪಂಚಾಯತ್ ಸೇವೆಗಳನ್ನು ಕುಡಿಯುವ ನೀರು ಬೀದಿ ದೀಪ ಹಾಗೂ ಸ್ವಚ್ಛತೆ ಹೊರೆತುಪಡಿಸಿ ನಿಲ್ಲಿಸಿ ಅರ್ನಿರ್ದಿಷ್ಟಾವದಿ ಹೋರಾಟ ಹಮ್ಮಿ ಕೊಳ್ಳುವುದು ಎಂದು ಗ್ರಾಮ ಪಂಚಾಯತ್ ಕ್ಷೇಮಾಭಿವೃದ್ಧಿ ಸಂಘದ ಎಸ್ ಎಫ್ ಮಾಳವಾಡ ತಿಳಿಸಿದರು.
ತಾಲೂಕು ಪಂಚಾಯಿತಿ ಇ ಓ ಕೃಷ್ಣಪ್ಪ ಧರ್ಮಾ ರವರಿಗೆ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ಯ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲಾ ವೃಂದ ಸಂಘಗಳು ಮತ್ತು ಗ್ರಾಮ ಪಂಚಾಯತಿ ಸದಸ್ಯರ ಒಕ್ಕೂಟದ ವತಿಯಿಂದ ಮನವಿ
ಸಲ್ಲಿಸಿ ಮಾತನಾಡಿದರು.
ಈ ವ್ಯವಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಗ್ರಾಮ ಪಂಚಾಯತ್ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಕಾರ್ಯದರ್ಶಿಗಳು ದ್ವಿತೀಯ ದರ್ಜೆ ಲೆಕ್ಕ ಸಹಾಯಕರು, ಸ್ವಚ್ಛತಾ ಗಾರರು ಸ್ವಚ್ಛತಾ ಗಾರರು ಕಾರ್ಯನಿರ್ವಹಣೆಯಲ್ಲಿ ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ಪರಿಹರಿಸುವಂತೆ ಸರ್ಕಾರ ಮತ್ತು ಇಲಾಖೆಗೆ ಹಲವಾರು ವರ್ಷಗಳಿಂದ ಮನವಿ ಸಲ್ಲಿಸಿದರು ಕೂಡ ಯಾವುದೇ ಪ್ರಯೋಜನ ಇಲ್ಲ ಎಂದು ಸೂರಿದರು. ರಾಜ್ಯದಲ್ಲಿ ಶೇಕಡ 70ರಷ್ಟು ಜನ ಸಮೂಹಕ್ಕೆ ಸೇವೆ ಒದಗಿಸುತ್ತಿರುವೆ. ಎಲ್ಲಾ ಸಮಸ್ಯೆಗಳಿಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ನೌಕರರು ಹಾಗೂ ಸಿಬ್ಬಂದಿಯನ್ನು ನೇರ ಹೊಣೆಗಾರರನ್ನಾಗಿ ಮಾಡುತ್ತಿರುವ ಸರ್ಕಾರ ಮತ್ತು ಇಲಾಖೆ ಧೋರಣೆಯನ್ನು ಖಂಡಿಸಿದರು.
ನಮ್ಮ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಅಕ್ಟೋಬರ್ 4 ರಿಂದ ಅನಿರ್ದಿಷ್ಟಾವಧಿ ಹೋರಾಟವನ್ನು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದರು.
ಡಿಇಓ, ಜಲಗಾರರು, ಕಚೇರಿ ಸಹಾಯಕರು, ಸ್ವಚ್ಛತಾ ಗಾರರು ಕಾರ್ಯನಿರ್ವಹಿಣೆಯಲ್ಲಿ ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ಪರಿಹರಿಸುವಂತೆ ಸರ್ಕಾರ ಮತ್ತು ಇಲಾಖೆಗೆ ಹಲವಾರು ವರ್ಷಗಳಿಂದ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಿಲ್ಲ ಎಂದು ದೂರಿದರು. ರಾಜ್ಯದಲ್ಲಿ ಶೇಕಡ 70 ರೆಷ್ಟು ಜನ ಸಮೂಹಕ್ಕೆ ಸೇವೆ ಒದಗಿಸುತ್ತಿದ್ದೇವೆ. ಎಲ್ಲಾ ಸಮಸ್ಯೆಗಳಿಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನೌಕರರು ಹಾಗೂ ಸಿಬ್ಬಂದಿಯನ್ನು ನಿರ್ವಹಣೆಗಾರರನ್ನಾಗಿ ಮಾಡುತ್ತಿರುವ ಸರ್ಕಾರ ಮತ್ತು ಇಲಾಖೆ ಧೊರಣೆಯನ್ನು ಖಂಡಿಸಿ. ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಕ್ಟೋಬರ್ 4 ರಿಂದ ಅನಿರ್ದಿಷ್ಟಾವಧಿ ಹೋರಾಟವನ್ನು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಕೈಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಮಂಜುನಾಥ್ ಮಲ್ಲೂರ್, ಕೆಸಿ ಕಡೂರು, ರವಿ ಕೂಗನೂರ್, ಬಿಬಿ ತಳವಾರ್, ರಾಮಯ್ಯ ಗುರುವಿನ, ಶ್ರೀಕಾಂತ್ ಬಾಲೆಹೊಸೂರು, ಕವಿತಾ ಅಣ್ಣಿಗೇರಿ, ಮಹೇಶ್ ಮೂಲಿಮನಿ, ರಾಮಪ್ಪ ಮಸೂತಿ, ಬಸವರಾಜ ಅರ್ಕಸಾಲಿ, ಫಕೀರೇಶ ನಿಂಗನಗೌಡ, ಬಾಗವಾಡ ಹಾಗೂ ವಿವಿಧ ವರ್ಗಗಳ ಗ್ರಾಮ ಪಂಚಾಯತ್ ನೌಕರರು ಹಾಜರಿದ್ದರು.